ನಿನ್ನೆಯಷ್ಟೇ ಬ್ಯಾಂಕಾಕ್ (Bangkok) ನಲ್ಲಿ ನಿಧನರಾದ ಸ್ಪಂದನಾ (Spandana) ಮೃತದೇಹವನ್ನು ಬ್ಯಾಂಕಾಕ್ ನ ಸುವರ್ಣಭೂಮಿ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಆ ವಿಮಾನವು 8.30ಕ್ಕೆ ಬ್ಯಾಂಕಾಕ್ ನಿಂದ ಹೊರಡಲಿದ್ದು, ಬೆಂಗಳೂರಿಗೆ 11.20ಕ್ಕೆ ಆಗಮಿಸಲಿದೆ. ಅದೇ ವಿಮಾನದಲ್ಲೇ ವಿಜಯ ರಾಘವೇಂದ್ರ ಮತ್ತು ಸ್ಪಂದನಾ ಜೊತೆ ಪ್ರವಾಸಕ್ಕೆ ತೆರಳಿದ್ದ ಸಂಬಂಧಿಕರು ಕೂಡ ಬೆಂಗಳೂರಿಗೆ (Bangalore) ಆಗಮಿಸಲಿದ್ದಾರೆ.
Advertisement
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದಕ್ಕಾಗಿ ಮತ್ತು ಆದಷ್ಟು ಬೇಗ ಮೃತದೇಹವನ್ನು ಪಡೆಯುವುದಕ್ಕಾಗಿ ಈಗಾಗಲೇ ಸ್ಪಂದನಾ ಕುಟುಂಬಸ್ಥರು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊರಟಿದ್ದಾರೆ. ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ಮತ್ತು ಇತರರು ರಾತ್ರಿ 9 ಗಂಟೆಯ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ:ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ
Advertisement
Advertisement
ಬೆಂಗಳೂರು ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಸ್ಪಂದನಾ ಅವರ ತಂದೆಯ ಮನೆಗೆ ತರಲಾಗುತ್ತಿದೆ. ಮಲ್ಲೇಶ್ವರಂನಲ್ಲಿರುವ (Malleswaram) ಬಿ.ಕೆ.ಶಿವರಾಮ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿಯಿಂದಲೇ ಅಂತಿಮ ದರ್ಶನ ಪಡೆಯಬಹುದಾಗಿದೆ.
Advertisement
ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.
Web Stories