ಲಕ್ನೋ: ವಿಶ್ವ ಪ್ರಸಿದ್ಧ ತಾಜ್ ಮಹಲ್ (Taj Mahal) ವೀಕ್ಷಣೆಗೆ ಬರುವ ಪ್ರವಾಸಿಗರ (Tourist) ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಿದ್ದಾರೆ. ಹಾಗೆಯೇ ಸ್ಪೇನ್‌ನಿಂದ (Spain) ಬಂದಿದ್ದ ಮಹಿಳೆಯೊಬ್ಬರ ಮೇಲೆ ಕೋತಿ ದಾಳಿ ನಡೆಸಿದೆ.
ತಾಜ್‌ಮಹಲ್ (Taj Mahal) ಮುಂಭಾಗದ ರಾಯಲ್ ಗೇಟ್ ಬಳಿ ಫೋಟೋ ತೆಗೆಯಲೆಂದು ನಿಂತಿದ್ದ ಸ್ಪೇನ್ ಮಹಿಳೆ (Spanish woman) ಮೇಲೆ ಕೋತಿ ಎರಗಿ ದಾಳಿ ಮಾಡಿದೆ. ಈ ವೇಳೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹಿಳೆ ಸ್ಥಳದಲ್ಲೇ ಗಳಗಳನ್ನೆ ಅತ್ತಿದ್ದಾಳೆ. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ
Advertisement
Advertisement
2019ರಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಾಜ್ ಮಹಲ್‌ನ ರಕ್ಷಣೆಯ ಜವಾಬ್ದಾರಿ ವಹಿಸಿತ್ತು. ಈ ವೇಳೆ ಕೋತಿಗಳನ್ನು (Monkey) ಓಡಿಸಲು ಸಿಂಗಲ್‌ಶಾಟ್ ಗನ್ ಬಳಕೆ ಮಾಡಲಾಗುತ್ತಿತ್ತು. ಇದಕ್ಕೆ ಪ್ರಾಣಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಇದನ್ನೂ ಓದಿ: ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ
Advertisement
Advertisement
ಪ್ರವಾಸಿಗರ ಮೇಲೆ ಕೋತಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಮಸ್ಯೆ ಬಗೆಹರಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.