ಯುವ ನಟ ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಬಿಡುಗಡೆಗೆ ಮುಹೂರ್ತ ಫಿಕ್ಸ್

Public TV
1 Min Read
spark life film

ತೆಲುಗಿನ ಯುವ ನಟ ವಿಕ್ರಾಂತ್ (Vikranth) ನಟನೆಯ ಸ್ಪಾರ್ಕ್ ಲೈಫ್ (Spark Life) ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ನಿರ್ದೇಶನದ ಈ ಚಿತ್ರಕ್ಕೆ ವಿಕ್ರಾಂತ್ ನಾಯಕನಾಗಿ ನಟಿಸುವುದರ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ.‌

spark life film 1

ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ‘ಹೃದಯಂ’ ಮತ್ತು ಕುಶಿ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡುತ್ತಿದ್ದಾರೆ. ಮಲಯಾಳಂನ ಹಿರಿಯ ನಟ ಗುರು ಸೋಮಸುಂದರಂ ಖಳನಾಯಕನಾಗಿ ನಟಿಸಿದ್ದಾರೆ. ಇದನ್ನೂ ಓದಿ:2ನೇ ಮಗುವಿನ ಆಗಮನ ಬಗ್ಗೆ ಸಿಹಿಸುದ್ದಿ ಕೊಟ್ರು ಧ್ರುವ ಸರ್ಜಾ ದಂಪತಿ

spark life

ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರೊಡಕ್ಷನ್ ಚಟುವಟಿಕೆಗಳಲ್ಲಿ ನಿರತರಾಗಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಟೀಸರ್‌ಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಆಕ್ಷನ್ ದೃಶ್ಯಗಳ ಜೊತೆಗೆ ಎಮೋಷನ್ಸ್, ಲವ್ ಮುಂತಾದ ಅಂಶಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

ಈ ಚಿತ್ರದಲ್ಲಿ ವಿಕ್ರಾಂತ್, ಪಿರ್ಜಾದಾ, ರುಕ್ಸಾರ್ ಧಿಲ್ಲೋನ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇದು ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಬ್ರಹ್ಮಾಜಿ, ಶ್ರೀಕಾಂತ್ ಅಯ್ಯಂಗಾರ್, ಚಮ್ಮಕ್ ಚಂದ್ರ, ಅನ್ನಪೂರ್ಣಮ್ಮ, ರಾಜಾ ರವೀಂದ್ರ ಮುಂತಾದವರು ತಾರಾ ಬಳಗದಲ್ಲಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Share This Article