ನವದೆಹಲಿ: ಇಂದು ಸಂಜೆ 6 ಗಂಟೆಯ ಒಳಗಡೆ ನಿರ್ಧಾರ ತಿಳಿಸಲು ಸಾಧ್ಯವಿಲ್ಲ ಎಂದು ಹೇಳಿ ಸ್ಪೀಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು ಸಂಜೆ 6 ಗಂಟೆಯ ಒಳಗಡೆ ಶಾಸಕರ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರವನ್ನು ಕೈಗೊಂಡು ಶುಕ್ರವಾರ ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ಸ್ಪೀಕರ್ ಗೆ ಆದೇಶಿಸಿತ್ತು.
ಈಗ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಸ್ಪೀಕರ್, ನನಗೆ ಆದೇಶ ನೀಡಲು ನ್ಯಾಯಾಲಯಗಳಿಗೆ ಆದೇಶವಿಲ್ಲ. ನಾನು ನಿಯಮಗಳ ಪ್ರಕಾರವೇ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಹೇಳಿ ಸುಪ್ರೀಂ ಮೆಟ್ಟಿಲೇರಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತುರ್ತು ವಿಚಾರಣೆ ಇಂದು ನಡೆಸುವುದಿಲ್ಲ. ಶುಕ್ರವಾರ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದೆ.
Congress leader and advocate Abhishek Manu Singhvi, who had mentioned the matter before the Supreme Court, told the Court that such a direction, asking the Speaker to decide on the resignation of ten rebels, can't be issued by the SC.
— ANI (@ANI) July 11, 2019
ಸುಪ್ರೀಂ ಆದೇಶ ಏನು?
ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಇಂದು ಸಂಜೆ 6 ಗಂಟೆಯೊಳಗೆ ಖುದ್ದಾಗಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಬೇಕು ಎಂದು ಕೋರ್ಟ್ ಸೂಚಿಸಿತ್ತು. ಅಲ್ಲದೆ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದೇ ನಿರ್ಧಾರ ಕೈಗೊಳ್ಳಬೇಕು. ಆ ನಿರ್ಧಾರವನ್ನು ನಾಳೆ ತನಗೆ ತಿಳಿಸಬೇಕೆಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.