ಬೆಂಗಳೂರು: ಸಚಿವ ಸ್ಥಾನ ಸಿಗದೆ ಕಾಂಗ್ರೆಸ್ ವಿರುದ್ಧ ಬಂಡಾಯವೆಂದಿದ್ದ ಉಮೇಶ್ ಜಾಧವ್ ರಾಜೀನಾಮೆ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದು, ನಾನು ತೆಗೆದುಕೊಳ್ಳುವ ನಿರ್ಧಾರ ಮೈಲಿಗಲ್ಲಾಗಬೇಕು ಎಂದು ಹೇಳಿದ್ದಾರೆ.
ನಾನು ಒಬ್ಬರ ಪರ ತೀರ್ಮಾನ ತೆಗೆದುಕೊಂಡಿದ್ದೇನೆ ಎಂದಾಗಬಾರದು. ಉಮೇಶ್ ಜಾಧವ್ ನನ್ನ ಹಳ್ಳಿಗೆ ಬಂದಿದ್ದರು. ಕೆಲವು ಹಿರಿಯ ಕಾನೂನು ತಜ್ಞರ ಅಭಿಪ್ರಾಯ ಕೇಳ್ತಿದ್ದೇನೆ. ನನಗೆ ಯಾರೂ ಒತ್ತಡ ಹಾಕಿಲ್ಲ. ನಾನು ಸಾಮಾನ್ಯರಲ್ಲಿ ಸಾಮಾನ್ಯ. ನನಗೂ ಒಂದಿಷ್ಟು ಗೊಂದಲಗಳಿವೆ ಎಂದರು.
Advertisement
ನಾನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಉಮೇಶ್ ಜಾಧವ್ ಅವರಿಗೆ ಕೆಲ ವಿವರಣೆಗಳನ್ನು ಕೇಳಿ ನೋಟಿಸ್ ನೀಡಿದ್ದೇನೆ. ಅವರಿಂದ ಉತ್ತರ ನಿರೀಕ್ಷೆ ಮಾಡಲಾಗುತ್ತಿದೆ. ಅವರು ನೀಡುವ ವಿವರಣೆ ಬಳಿಕ ಮತ್ತೊಮ್ಮೆ ಕಾನೂನು ತಜ್ಞರ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv