ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ (U.T Khader) ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ (Zameer Ahmed Khan) ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ: ಜಮೀರ್
Advertisement
Advertisement
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.
Advertisement
ಜಮೀರ್ ಹೇಳಿದ್ದೇನು..?: ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂ ಸ್ಪೀಕರ್ (Muslim Speaker) ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿಯುತ್ತಾರೆ ಎಂದು ಜಮೀರ್ ಅಹಮದ್ ಹೇಳಿದ್ದರು.
Advertisement