ನಾಳೆ ಸಂಜೆ 6.45ಕ್ಕೆ ಮಂತ್ರಿ ಮಾಲ್ ನ ಸ್ಕೀನ್ ನಲ್ಲಿ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸದನದಲ್ಲೇ ಶಾಸಕರಿಗೆ ಆಹ್ವಾನ ನೀಡಿದ್ದಾರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ. ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?
Advertisement
ಮಂತ್ರಿ ಮಾಲ್ ನ ಸ್ಕ್ರೀನ್ ನಂ 6ರಲ್ಲಿ ಎಲ್ಲ ಶಾಸಕರಿಗಾಗಿ ಸಿನಿಮಾ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ಚಿತ್ರ ವೀಕ್ಷಣೆಗೆ ಬರಬೇಕು ಎಂದು ಸ್ಪೀಕರ್ ಕಾಗೇರಿ ಮನವಿ ಮಾಡಿದರು. ಜೊತೆಗೆ ಈ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದು, ವಿಪಕ್ಷ ಶಾಸಕರನ್ನು ಚಿತ್ರ ವೀಕ್ಷಣೆಗೆ ಆಹ್ವಾನಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್
Advertisement
Advertisement
ಈ ಸಿನಿಮಾದ ಬಗ್ಗೆ ಪರ ಮತ್ತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಡೆ ಭಾರೀ ಅಚ್ಚರಿಗೆ ಕಾರಣವಾಗಬಹುದು. ನೆನ್ನೆಯಷ್ಟೇ ಈ ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಹಲವು ಮಂತ್ರಿಗಳು ವೀಕ್ಷಿಸಿದ್ದರು. ಇದನ್ನೂ ಓದಿ : ಇರುವೆ ಪಾತ್ರವಾಗಿ ಬಂದ ಸಂಚಾರಿ ವಿಜಯ್
Advertisement
ಸಿನಿಮಾ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಚಿತ್ರದ ಬಗ್ಗೆ ತಕ್ಷಣವೇ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬಾ ಭಾವುಕನಾಗಿದ್ದೇನೆ. ಕಾಶ್ಮೀರದಲ್ಲಿ ಪಂಡಿತರ ಮೇಲೆ ಯಾವ ರೀತಿ ದಾಳಿ ನಡೆಯಿತು ಎಂದು ತೋರಿಸಿದ್ದಾರೆ’ ಎಂದಿದ್ದರು. ಆನಂತರ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದರು.