ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬಲೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸ ತುಂಬಿಸಲು ತೈಲದ ಮೆಲೆ ಅಬಕಾರಿ ಸುಂಕ ಹೆಚ್ಚಿಸಲು ಮೋದಿ ಸರ್ಕಾರ ಮುಂದಾಗಿದೆ.
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೆಚ್ಚುವರಿ ಮೂಲ ಸೌಕರ್ಯ ಸೆಸ್ ಅಡಿಯಲ್ಲಿ ಒಂದು ರೂ. ಸೆಸ್ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Advertisement
FM Nirmala Sitharaman: I propose to increase special additional excise duty and road and infrastructure cess each one by 1 rupee a litre on petrol and diesel pic.twitter.com/y9DoC5IGIX
— ANI (@ANI) July 5, 2019
Advertisement
ಪೆಟ್ರೋಲ್ ಮತ್ತು ಡೀಸೆಲ್‍ನಲ್ಲಿ ಸಂಗ್ರಹಗೊಂಡ ಹಣವನ್ನು ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement
ನಿರ್ಮಲಾ ಸೀತಾರಾಮನ್ ಅವರು ಈ ಅಂಶಗಳನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕುಳಿತ್ತಿದ್ದ ವಿರೋಧ ಪಕ್ಷದ ಸದಸ್ಯರು ಅಲ್ಲೇ ವಿರೋಧ ವ್ಯಕ್ತಪಡಿಸಿದರು.
Advertisement
ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದಾಗ ಭಾರತದ ಕೆಲ ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆಯಾಗಿತ್ತು. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90 ರೂ.ಗೆ ಏರಿತ್ತು. ಈ ವೇಳೆ ಕೇಂದ್ರ ಸರ್ಕಾರ 1 ರೂ. ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು.
ಮೊದಲ ಅವಧಿಯಲ್ಲಿ ಕೆಲವೊಮ್ಮೆ ಕಚ್ಚಾ ತೈಲದ ಬೆಲೆ ಕಡಿಮೆಯಾದಾಗ ಅಬಕಾರಿ ಸುಂಕ ಕಡಿಮೆ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು. ಈ ವೇಳೆ ಪೆಟ್ರೋಲ್, ಡೀಸೆಲ್ ನಲ್ಲಿ ಸಂಗ್ರಹಗೊಂಡ ಹಣವನ್ನು ಮೂಲಸೌಕರ್ಯ ಸೇರಿದಂತೆ ಇತರ ಯೋಜನೆಗಳಿಗೆ ಬಳಸಿಕೊಳ್ಳುತ್ತೇವೆ ಎಂದು ಸರ್ಕಾರ ಉತ್ತರ ನೀಡಿತ್ತು.