ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ ರೆಸಾರ್ಟ್ ಪಾಲಿಟಿಕ್ಸ್ ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಭೀತಿಯಲ್ಲಿ ಗುಜರಾತ್ ಶಾಸಕರು ಬೆಂಗಳೂರಿನ ಈಗಲ್‍ಟನ್ ರೆಸಾರ್ಟ್‍ನಲ್ಲಿ ತಂಗಿದ್ದರು. ಆದ್ರೆ ಶಾಸಕರನ್ನ ನೋಡಿಕೊಳ್ತಿದ್ದ ಸಚಿವ ಡಿಕೆಶಿಗೆ ಐಟಿ ಶಾಕ್ ನೀಡಿರೋ ಹಿನ್ನೆಲೆಯಲ್ಲಿ ಈಗಲ್‍ಟನ್ ರೆಸಾರ್ಟ್‍ನಲಿಯೂ ಇರೋದು ಸೇಫಲ್ಲ ಎಂದು ಭಾವಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ.
Advertisement
ಹೈಕಮಾಂಡ್ ಸೂಚನೆ ಪಡೆದು ಬೇರೆಡೆಗೆ ಶಿಫ್ಟ್ ಆಗಲು ತಯಾರಿ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಈಗಲ್‍ಟನ್ ರೆಸಾರ್ಟ್‍ನಿಂದ ಗುಜರಾತ್ ಶಾಸಕರು ಬೇರೆಡೆ ಶಿಫ್ಟ್ ಆಗುವ ಸಾಧ್ಯತೆಯಿದೆ.
Advertisement
Advertisement
ಡಿಕೆಶಿ ಮೇಲಿನ ಐಟಿ ದಾಳಿಗೆ ಹೆದರಿದ ರೆಸಾರ್ಟ್ ಮಾಲೀಕರು ಗುಜರಾತ್ ಕಾಂಗ್ರೆಸ್ ಶಾಸಕರು ರೆಸಾರ್ಟ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಸದ್ಯ ಗುಜರಾತ್ ಶಾಸಕರ ಮೇಲ್ವಿಚಾರಣೆಯಲ್ಲಿ ತೊಡಗಿರುವ ಡಿ.ಕೆ.ಸುರೇಶ್ ಗೂ ಕೂಡ ಈ ಬಗ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ರೆಸಾರ್ಟ್‍ನಿಂದ ಗುಜರಾತ್ ಶಾಸಕರು ಬೇರೆಡೆಗೆ ಶಿಫ್ಟ್ ಆಗುವ ಸಾಧ್ಯತೆ ದಟ್ಟವಾಗಿದೆ.
Advertisement
ಮೊದಲಿಗೆ ವಿಶೇಷ ಬಸ್ ವೊಂದು ರೆಸಾರ್ಟ್‍ನೊಳಗೆ ಎಂಟ್ರಿ ಕೊಟ್ಟಿದ್ದನ್ನು ನೋಡಿ ಗುಜರಾತ್ ಶಾಸಕರು ರೆಸಾರ್ಟ್‍ನಿಂದ ಶಿಫ್ಟ್ ಆಗಲು ಬಂದಿರುವ ಬಸ್ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ಬಸ್ ನಟ ಕಿಚ್ಚ ಸುದೀಪ್ ಅವರ ಸಿನಿಮಾ ಚಿತ್ರೀಕರಣಕ್ಕಾಗಿ ಬಂದಿರುವುದು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಮನೆಯಲ್ಲಿ ಸಿಕ್ಕಿತು 7.5 ಕೋಟಿ ರೂ. ಹಣ: ಮುಂದೆ ಈ ನಾಯಕರ ಮನೆ ಮೇಲೆ ದಾಳಿ?
Congress MLA Shaktisinh Gohil shares video of CRPF personnel in Bengaluru's Eagleton Resort during IT raid (video source:Shaktisinh Gohil) pic.twitter.com/c827asDP1w
— ANI (@ANI) August 2, 2017
ಪವರ್ ಮಂತ್ರಿ ಸಾಮ್ರಾಜ್ಯಕ್ಕೆ ಐಟಿ ಕನ್ನ- ಸತತ 2ನೇ ದಿನವೂ ಶೋಧ ಕಾರ್ಯ https://t.co/aXforuKLrR @IamDKShivakumar #ITRaid #Bengaluru pic.twitter.com/vsTcp5oVmD
— PublicTV (@publictvnews) August 3, 2017
ಅತ್ತ ಡಿಕೆ ಶಿವಕುಮಾರ್ ಮನೆಯಲ್ಲಿ ಸತತ ಎರಡನೇ ದಿನವೂ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.
ಗಾಲ್ಫ್ ಆಡೋ ನೆಪದಲ್ಲಿ ಎಂಟ್ರಿಕೊಟ್ಟು ಡಿಕೆಶಿಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು ಹೀಗೆ. ಯಾವ ಸಮಯದಲ್ಲಿ ಏನಾಯ್ತು? https://t.co/qkWiNFQwsU #DKShivakumar pic.twitter.com/1ZdFdWf6vB
— PublicTV (@publictvnews) August 2, 2017