ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದೇನೆ, 3 ವಾರ ವಿಶ್ರಾಂತಿ ಬೇಕು: ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಸುರೇಶ್ಕುಮಾರ್
Advertisement
Advertisement
ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ವಜಾಗೊಳಿಸಿದ್ದಾರೆ.
Advertisement
ಈ ಹಿಂದೆ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು.