– ಹಬ್ಬದ ಪ್ರಯಾಣಿಕರಿಗೆ ರೈಲ್ವೆಯಿಂದ ಗುಡ್‌ನ್ಯೂಸ್
ಹುಬ್ಬಳ್ಳಿ: ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಾಗೂ ಛತ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಹುಬ್ಬಳ್ಳಿ–ಚಿಕ್ಕಮಗಳೂರು (Hubballi-Chikkamagaluru) ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 07341 ಎಸ್ಎಸ್ಎಸ್ ಹುಬ್ಬಳ್ಳಿ–ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 5ರಿಂದ ಅಕ್ಟೋಬರ್ 31ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಸಂಚರಿಸಲಿದೆ. ಬೆಳಗ್ಗೆ 5 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 11:15ಕ್ಕೆ ಚಿಕ್ಕಮಗಳೂರು ತಲುಪಲಿದೆ. ಇದನ್ನೂ ಓದಿ: ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಸೆಪ್ಟೆಂಬರ್‌ನಲ್ಲಿ ಪಿಂಕ್ ಲೈನ್ ಉದ್ಘಾಟನೆಗೆ ಸಜ್ಜು?
ಹಿಂತಿರುಗುವ ರೈಲು ಸಂಖ್ಯೆ 07342 ಚಿಕ್ಕಮಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ಇದೇ ಅವಧಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಸಂಚರಿಸಲಿದ್ದು, ಸಂಜೆ 5:30ಕ್ಕೆ ಚಿಕ್ಕಮಗಳೂರಿನಿಂದ ಹೊರಟು ರಾತ್ರಿ 11:20ಕ್ಕೆ ಹುಬ್ಬಳ್ಳಿ ತಲುಪಲಿದೆ.
ಈ ರೈಲು ಕುಂದಗೋಳ, ಸಂಶಿ, ಯಲವಿಗಿ, ಹಾವೇರಿ, ಬ್ಯಾಡಗಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಅಜ್ಜಂಪುರ, ಬೀರೂರು, ಕಡೂರು, ಸಖರಾಯಪಟ್ಟಣ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಇದನ್ನೂ ಓದಿ: ಎಇಇ ನೇಮಕಾತಿ ಅಕ್ರಮ| ಸರಣಿ ಪ್ರಶ್ನೆ ಕೇಳಿ ಪ್ರಿಯಾಂಕ್ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ
ವಿಶೇಷ ರೈಲಿನಲ್ಲಿ ಒಂದು ಸ್ಲೀಪರ್ ಕ್ಲಾಸ್, 7 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್-ಕಮ್-ಬ್ರೇಕ್/ದಿವ್ಯಾಂಗಜನ ಬೋಗಿಗಳು ಇರಲಿವೆ. ಹಬ್ಬದ ಸಂದರ್ಭದಲ್ಲಿ ಹುಬ್ಬಳ್ಳಿ–ಚಿಕ್ಕಮಗಳೂರು ಭಾಗದ ಪ್ರಯಾಣಿಕರಿಗೆ ಈ ವಿಶೇಷ ರೈಲು ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಿದೆ.
