ಬೆಂಗಳೂರು: ಕರ್ನಾಟಕದಲ್ಲಿ (Karnataka) ಮೊದಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision -SIR) ಮಾಡುವವರು ಯಾರು? ಕೇಂದ್ರ ಚುನಾವಣಾ ಆಯೋಗ ಮೊದಲೋ? ರಾಜ್ಯ ಚುನಾವಣಾ ಆಯೋಗ (State Election commsion) ಮೊದಲೋ? ಎಂಬ ಕುತೂಹಲ ಮನೆ ಮಾಡಿದೆ.
ಹೌದು.ಈಗ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಭರ್ಜರಿ ಸಿದ್ಧತೆ ನಡೆದಿದ್ದು, ನಾವು ನವೆಂಬರ್ 1 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತೇವೆ. ಕೇಂದ್ರ ಚುನಾವಣಾ ಆಯೋಗ ಎಸ್‌ಐಆರ್ ಮುಂದೂಡಲಿ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ಹೇಳಿದ್ದಾರೆ. ಇದನ್ನೂ ಓದಿ: 3 ತಿಂಗಳು ನನ್ನ ಮನೆಮುಂದೆ ಮಾಧ್ಯಮಗಳು ಕಾಯೋ ಹಾಗೇ ಮಾಡಿದ್ದು ಯಾರ ಪ್ರೇರಣೆಯಿಂದ – HDD ಕಿಡಿ
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಡಲಿ. ಆದರೆ ರಾಜ್ಯ ಚುನಾವಣಾ ಆಯೋಗಕ್ಕೂ ಅಧಿಕಾರ ಇದೆ. ಈಗಾಗಲೇ ಕೇರಳದಲ್ಲಿ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮಾಡ್ತಿದ್ದಾರೆ. ಹಾಗಾಗಿ ಕೇಂದ್ರ ಚುನಾವಣಾ ಆಯೋಗ ಎಸ್‌ಐಆರ್ ಮುಂದಕ್ಕೆ ಹಾಕಬೇಕು. ಕೇಂದ್ರ ಚುನಾವಣಾ ಆಯೋಗಕ್ಕೆ ನಾವು ಪತ್ರ ಬರೆದಿದ್ದು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.
ನವೆಂಬರ್ ಅಂತ್ಯದೊಳಗೆ ಸುಪ್ರೀಂಕೋರ್ಟ್‌ಗೆ (Supreme Court) ನಾವು ಗ್ರೇಟರ್ ಬೆಂಗಳೂರು ಅಥಾರಿಟಿ(GBA) ವಾರ್ಡ್ ಮೀಸಲಾತಿ ಪಟ್ಟಿ ಸಲ್ಲಿಸಬೇಕು. ಹಾಗಾಗಿ ನಾವೇ ಮತದಾರರ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಯಾವುದೇ ಡಿಲಿಟೇಶನ್ ಗೊಂದಲ ಆಗುವುದಿಲ್ಲ. ಕೇಂದ್ರ, ರಾಜ್ಯದ ಪರಿಷ್ಕರಣೆಯಲ್ಲಿ ದೊಡ್ಡ ವ್ಯತ್ಯಾಸ ನಡೆಯುವುದಿಲ್ಲ. ಕೇಂದ್ರ ಸರ್ಕಾರದ ರೀತಿಯಲ್ಲೇ ನಾವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತೇವೆ. 2026ಮೇ ಒಳಗೆ ಗ್ರಾಮ ಪಂಚಾಯ್ತಿ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ, ಜಿಬಿಎ ಪಾಲಿಕೆಗಳ ಚುನಾವಣೆ ಮುಗಿಸಬೇಕು.ಹಾಗಾಗಿ ನಾವು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲೇಬೇಕು. ನಮಗೂ ಸಂವಿಧಾನಿಕ ಅಧಿಕಾರ ಇದೆ ಎಂದು ಹೇಳಿದರು.