ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಸಂಸದ ತೇಜಸ್ವಿ ಸೂರ್ಯ ಮನೆಗೆ ವಿಶೇಷ ಪೊಲೀಸ್ ಭದ್ರತೆ ನೀಡಲಾಗಿದೆ.
ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತೇಜಸ್ವಿ ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹೊಯ್ಸಳ ಪೊಲೀಸರು, ಸ್ಥಳೀಯ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆಗೆ ನಿಯೋಜನೆ ಮಾಡಲಾಗಿದ್ದು, ಇನ್ನೂ ಕೆಲ ಪೊಲೀಸರು ಮಫ್ತಿಯಲ್ಲಿ ಕಾರ್ಯನಿರ್ವಹಣೆ ಮಾಡ್ತಿದ್ದಾರೆ. ಇದನ್ನೂ ಓದಿ: ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ
Advertisement
Advertisement
ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ಅನುಮಾನಾಸ್ಪದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದು, ತೇಜಸ್ವಿ ಮನೆ ಅವರ ಓಡಾಟದ ಬಗ್ಗೆ ಮಾಹಿತಿ ಪಡೆದು ಭದ್ರತೆಗೆ ಬೇಕಾದ ಎಲ್ಲಾ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ
Advertisement
ಸಿಎಎ, ಎನ್‍ಆರ್ ಸಿ ಪರ ನಗರದ ಟೌನ್ ಹಾಲ್ ಬಳಿ ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ವಿವಿಧ ಮುಖಂಡರು ಘೋಷಣೆ ಕೂಗಿದ್ದರು. ಈ ವೇಳೆ ಆರು ಜನ ದುಷ್ಕರ್ಮಿಗಳ ತಂಡ ಕಲ್ಲು ಎಸೆದು ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದರು ಎನ್ನುವುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಈಗಾಗಲೇ ಸೂಲಿಬೆಲೆ ಮನೆಗೆ ವಿಶೇಷ ಪೊಲೀಸ್ ಭದ್ರತೆ ನೀಡಲಾಗಿದೆ. ಇನ್ನೂ ನಗರದ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.