ಕೊಪ್ಪಳ: ಇದೇ ತಿಂಗಳು 12ರಂದು ಕೊಪ್ಪಳದ ಗಂಗಾವತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪೂಜೆ ನೆರವೇರಿಸಲಾಗಿದೆ.
ಇದೇ ತಿಂಗಳು 12 ರಂದು ಗಂಗಾವತಿಗೆ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರ ಪ್ರಚಾರಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದು, ಗಂಗಾವತಿ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಯಾವುದೇ ವಿಘ್ನಗಳು ನೆಡೆಯಬಾರದೆಂದು, ಕಾರ್ಯಕ್ರಮದ ನಡೆಯುವ ಸ್ಥಳದಲ್ಲಿ ವಿಶೇಷ ಭೂಮಿ ಪೂಜೆ ನೆರವೇರಿಸಲಾಯಿತು.
ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಬಿಜೆಪಿ ಮುಖಂಡರು ಭೂಮಿ ಪೂಜೆ ನೆರವೇರಿಸಿದರು. ಇನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಚುನಾವಣಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಮೋ ಕಾರ್ಯಕ್ರಮಕ್ಕೆ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಸುಮಾರು ಮೂರು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷಿಸಲಾಗಿದೆ. ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.