ಕಾರವಾರ: ಬೀಚ್‌ನಲ್ಲಿ ಮುಳುಗಿ ವಿದ್ಯಾರ್ಥಿನಿಯರ ಸಾವಿನ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಪ್ರವಾಸಿಗರ ಸುರಕ್ಷತೆಗಾಗಿ ಕಡಲ ತೀರಕ್ಕೆ ವಿಶೇಷ ನಿಯಮ ಜಾರಿಗೆ ತರಲು ಮುಂದಾಗಿದೆ.
ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ. ಕಡಲ ತೀರದ ಅಸುರಕ್ಷತೆ ಬಗ್ಗೆ ಮಾಧ್ಯಮದಲ್ಲಿ ಎಷ್ಟೆ ಸುದ್ದಿ ಮಾಡಿದ್ರು ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತ ಎಚ್ಚೆತ್ಕೊಂಡಿರಲಿಲ್ಲ. ಮೊನ್ನೆ ಕೊಲಾರ ಜಿಲ್ಲೆಯ ಅಮಾಯಕ ನಾಲ್ವರು ವಿದ್ಯಾರ್ಥಿನಿಯರು ಸಾವನಪ್ಪಿದಾಗ, ಜಿಲ್ಲಾ ಮಂತ್ರಿ ಸೇರಿದಂತೆ ಎಲ್ಲರನ್ನೂ ಕೋಲಾರ ಶಾಸಕ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ಕೊಂಡಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ
Advertisement
Advertisement
ಡಿ.11 ರಂದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತುರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಮುರುಡೇಶ್ವರ ಕಡಲ ತೀರದಲ್ಲಿ ಕೊಚ್ಚಿ ಹೋಗಿ ಸಾವನಪ್ಪಿದರು. ಇದರ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರಕ್ಕೆ ಸಾರ್ವಜನಿಕರನ್ನ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಸದಾ ಪ್ರವಾಸಿಗರಿಂದ ತುಂಬಿರುತ್ತಿದ್ದ ಮುರುಡೇಶ್ವರ ಕಡಲ ತೀರ ಈಗ ಫುಲ್ ಖಾಲಿ ಖಾಲಿ ಹೊಡೆಯುತ್ತಿದೆ. ಪದೇ ಪದೇ ಅವಘಡಗಳು ಸಂಭವಿಸಿದಾಗಲೆಲ್ಲ ತಾತ್ಕಾಲಿಕ ಕಡಲ ತೀರ ಕ್ಲೋಸ್ ಮಾಡಿ ಮತ್ತೆ ಯಥಾವತ್ತಾಗಿ ಆರಂಭ ಮಾಡುತ್ತಿದ್ದರು. ಇದರ ಪರಿಣಾಮ ಪ್ರತಿ ಒಂದೆರಡು ತಿಂಗಳಿಗೊಮ್ಮೆ ಒಂದೆರಡು ಪ್ರವಾಸಿಗರು ಸಾವನ್ನಪ್ಪುತ್ತಿದ್ದಾರೆ. ಸದ್ಯ ಪ್ರವಾಸಿಗರ ಸುರಕ್ಷತೆಯ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಮುರುಡೇಶ್ವರ ಸೇರಿದಂತೆ ಜಿಲ್ಲೆಯ ಪ್ರಮುಖ ಕಡಲ ತೀರಗಳಲ್ಲಿ ಸರ್ವೇ ಮಾಡಿ ಅಪಾಯ ಹೊಂದಿರುವ ಮತ್ತು ಅಪಾಯವಲ್ಲದ ಜಾಗವನ್ನ ಗುರುತಿಸಿ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
Advertisement
ವರ್ಷಾಂತ್ಯದ ಹಿನ್ನೆಲೆ ಜಿಲ್ಲೆಯ ಕಡಲ ತೀರ ಅಷ್ಟೆ ಅಲ್ಲ. ಇನ್ನುಳಿದ ಪ್ರವಾಸಿ ತಾಣಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ಕೊಡುವ ಸಾಧ್ಯತೆ ಇದೆ. ಹಾಗಾಗಿ, ಕಳೆದ ಹತ್ತು ದಿನಗಳಿಂದ ಸರಣಿ ಸಭೆ ಮಾಡುತ್ತಿರುವ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಸೇರಿದಂತೆ ಕರಾವಳಿ ಕಾವಲು ಪಡೆ, ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕಂದಾಯ ಇಲಾಖೆ ಹಾಗೂ ಸಂಬಂಧ ಪಟ್ಟ ಸ್ಥಳೀಯ ಪಂಚಾಯತ್ ಅಧಿಕಾರಿಗಳು ಸೇರಿಸಿ ಒಂದು ಸಮಿತಿ ರಚನೆಗೆ ಮುಂದಾಗಿದ್ದಾರೆ. ಅವರ ಸಲಹೆ ಮೇರೆಗೆ ಆಯಾ ಪ್ರವಾಸಿ ತಾಣಕ್ಕೆ ವಿಶೇಷ ನಿಯಮ ಜಾರಿಗೆ ತಂದು ಪ್ರವಾಸಿಗರ ಸುರಕ್ಷತೆ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ಧಾರೆ. ಇದನ್ನೂ ಓದಿ: ಮುರುಡೇಶ್ವರ | ಸಮುದ್ರದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿನಿಯರು ನೀರುಪಾಲು; ಮೂವರ ರಕ್ಷಣೆ