ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದಕ್ಕಾಗಿ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳ 1,800 ಗ್ರಾಮ ಪಂಚಾಯತಿ (Gram Panchayat) ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಮದುರ್ಗ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಐಪಿಎಲ್‍ಗೆ ನಿವೃತ್ತಿ ಘೋಷಿಸಿದ ಬ್ರಾವೋ – ಚೆನ್ನೈ ತಂಡದಲ್ಲಿ ಮುಂದುವರಿಕೆ
Advertisement
Advertisement
ಸರ್ಕಾರ (Government) ಜನಪ್ರಿಯವಾದರೆ ಸಾಲದು, ಜನಪರವಾಗಬೇಕು. ಆಗ ಮಾತ್ರ ಕಟ್ಟಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ. ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿ ಹೆಸರಿನಲ್ಲಿ ಕೆಲಸ ಮಾಡುತ್ತಿವೆ. ಮಹಾರಾಷ್ಟ್ರ (Maharashtra), ತಮಿಳುನಾಡು (Tamil Nadu), ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳಲ್ಲಿ 1,800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಬಿಎಸ್‌ವೈ ಭಾಗಿ
Advertisement
Advertisement
ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ:
ನಮ್ಮ ಸರ್ಕಾರ ಗಡಿಭಾಗದ ಶಾಲೆಗಳ (Schools) ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಪ್ರಸಕ್ತ ವರ್ಷದಲ್ಲೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಗೋವಾದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಜೊತೆಗೆ ಸೊಲ್ಲಾಪುರ ಹಾಗೂ ಕಾಸರಗೂಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂ. ಸಹ ನೀಡಲಿದೆ ಎಂದು ಭರವಸೆ ನೀಡಿದರು.
ತಡೆಗೋಡೆ ನಿರ್ಮಾಣ- ಕೆರೆಗಳಿಗೆ ನೀರು:
ರಾಮದುರ್ಗ ತಾಲ್ಲೂಕಿನ ಕೆಲ ಗ್ರಾಮಗಳು ಪದೇ ಪದೆ ಪ್ರವಾಹಕ್ಕೆ ಸಿಕ್ಕಿ ನಲುಗುತ್ತಿವೆ. ಆದ್ದರಿಂದ ಮಲಪ್ರಭಾ ನದಿತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಏತ ನೀರಾವರಿಯಿಂದ ವಂಚಿತಗೊಂಡಿರುವ 19 ಗ್ರಾಮಗಳ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅವರು ನಿರಂತರ ಒತ್ತಡ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರ ಕಳಕಳಿಯನ್ನು ಅರಿತುಕೊಂಡು ಅವರ ಒತ್ತಾಯದಂತೆ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಕೂಡಲೇ ಡಿಪಿಆರ್ ತಯಾರಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಡುತ್ತೇನೆ ಎಂದು ಸಿಎಂ ಘೋಷಿಸಿದರು.
600 ಕೋಟಿ ಶಿಷ್ಯ ವೇತನ:
ರಾಜ್ಯದ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 600 ಕೋಟಿ ರೂಪಾಯಿಗಿಂತಲೂ ಅಧಿಕ ಶಿಷ್ಯವೇತನವನ್ನು ರೈತನಿಧಿ ಯೋಜನೆ ಮೂಲಕ ಒದಗಿಸಲಾಗಿದೆ. ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.