CrimeDharwadDistrictsKarnatakaLatestMain Post

ಗುರೂಜಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ – ಪೊಲೀಸ್ ಆಯುಕ್ತ ಲಾಭೂರಾಮ್

Advertisements

ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಈಗಾಗಲೇ ಬಲೆ ಬೀಸಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ್ ಎಂದು ತಿಳಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಲಾಭೂರಾಮ್ ಅವರು ಮಾತನಾಡಿದ್ದು, ಕಳೆದ 5 ದಿನಗಳಿಂದ ಖಾಸಗಿ ಹೊಟೇಲ್‍ನಲ್ಲಿಯೇ ಚಂದ್ರಶೇಖರ್ ಗುರೂಜಿ ತಂಗಿದ್ದರು. ಅವರ ಕಾಲಿಗೆ ನಮಸ್ಕಾರ ಮಾಡುವ ನೆಪದಲ್ಲಿ ಮಧ್ಯಾಹ್ನ ಈ ಕೃತ್ಯ ಎಸಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಟ್ರೈನಿ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – IAS ಅಧಿಕಾರಿ ವಶ 

ಗುರೂಜಿ ಗಂಭೀರ ಗಾಯಗೊಂಡಿದ್ದರು. ಅಸ್ಪತ್ರೆಗೆ ದಾಖಲಿಸಲಾಯಿತ್ತು. ಅದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕೇಸ್‍ನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ಈಗಾಗಲೇ ಪೊಲೀಸ್ ಇಲಾಖೆ ಮುಂದಾಗಿದೆ. ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಈಗಾಗಲೇ ಬಲೆ ಬೀಸಲಾಗಿದೆ. ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಕುರಿತು ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು: ಬಿ.ಸಿ.ನಾಗೇಶ್ ಟಾಂಗ್

ಎಸಿಪಿ ರ‍್ಯಾಂಕ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ಸಹ ಮಾಡಲಾಗುತ್ತಿದೆ. ಪ್ರಕರಣ ಕುರಿತು ಒಟ್ಟು ಐದು ತಂಡಗಳಿಂದ ತನಿಖೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

Live Tv

Leave a Reply

Your email address will not be published.

Back to top button