ಅಮರಾವತಿ: ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ (Tirupati) ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ (Tirupati Laddu Row) ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ಈ ಹಿಂದೆ ಆಡಳಿತಾರೂಢ ತೆಲುಗು ದೇಶಂ ಪಕ್ಷವು (TDP), ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು. ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.
Advertisement
ಕಳೆದ ಐದು ವರ್ಷಗಳಲ್ಲಿ ತಿರುಮಲದಲ್ಲಿ ಅನೇಕ ಅಪವಿತ್ರ ಕೆಲಸಗಳನ್ನು ಮಾಡಲಾಗಿದೆ. ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ನಿಕಟವರ್ತಿಗಳನ್ನು ಟಿಟಿಡಿ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದರು ಎಂದು ಟಿಡಿಪಿ ಆರೋಪಿಸಿದೆ.
Advertisement
Advertisement
ಬುಧವಾರ ಎನ್‍ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿಎಂ ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿ (Jagan Mohan Reddy) ಸರ್ಕಾರದ ಅವಧಿಯಲ್ಲಿ ವೆಂಕಟೇಶ್ವರ ದೇವಸ್ಥಾನದ ಲಡ್ಡೂಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದರು. ಇದು ದೇಶದೆಲ್ಲಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
Advertisement
ಇದಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಜಗನ್ ಮೋಹನ್ ರೆಡ್ಡಿಯವರು, ತಿರುಪತಿ ದೇವಸ್ಥಾನದ ನಿಯಮಗಳ ಅಡಿ ತುಪ್ಪವನ್ನು ಪರಿಶೀಲಿಸಿ ಬಳಿಕ ಲಡ್ಡು ತಯಾರಿಕೆಗೆ ಬಳಸಲಾಗುತ್ತದೆ. ಈ ಪ್ರಕ್ರಿಯೆಯು ಹಲವು ದಶಕಗಳಿಂದ ಜಾರಿಯಲ್ಲಿದೆ. ಅಲ್ಲದೇ ತುಪ್ಪದ ಟ್ಯಾಂಕರ್‌ಗಳನ್ನು ತಿರಸ್ಕರಿಸಿದ ಹಲವಾರು ನಿದರ್ಶನಗಳಿವೆ. ನಾಯ್ಡು ಅವರು ದೇವರನ್ನು ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.