ಬೆಂಗಳೂರು: ದೀಪಾವಳಿ ಹಬ್ಬದ (Deepawali) ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯಿಂದ (South Western Railway) ವಿಶೇಷ ರೈಲುಗಳು ಸಂಚರಿಸಲಿವೆ.
ವಿಶೇಷ ರೈಲುಗಳು ಹುಬ್ಬಳ್ಳಿ, ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸಲಿದ್ದು, ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ. ರೈಲುಗಳ ಸಮಯ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.ಇದನ್ನೂ ಓದಿ: ದೀಪಾವಳಿಗೆ ಬೆಂಗಳೂರಿನಿಂದ ಹೆಚ್ಚುವರಿ KSRTC ಬಸ್ – ನಿಮ್ಮ ಊರಿಗೂ ಇದ್ಯಾ ಪರಿಶೀಲಿಸಿ
1. ರೈಲು ಸಂಖ್ಯೆ 07353/07354: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07353: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.17ರಂದು 4:00ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅ.18ರಂದು ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 07354: ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
2. ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 06229: ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಇದೇ ಅ.19ರಂದು ರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
ರೈಲು ಸಂಖ್ಯೆ 06230: ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.19ರಂದು 2:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಸ್ರೇಸನ್ ಲೈಸೆನ್ಸ್ ರದ್ದು, ಕಂಪನಿ ಬಂದ್
ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ. 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.
3. ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 06507: ಬೆಳಗಾವಿ -ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ರೈಲು ಸಂಖ್ಯೆ 06508: ಅ.18ರಂದು ರಾತ್ರಿ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ.19ರಂದು ಬೆಳಗ್ಗೆ 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.
ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ. 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.ಇದನ್ನೂ ಓದಿ: ಕುಟುಂಬಕ್ಕಾಗಿ ಬೆಂಗಳೂರಿನ ಕಾರ್ಪೊರೇಟ್ ಕೆಲಸಕ್ಕೆ ಗುಡ್‌ಬೈ – ಈಗ ಉಬರ್ ಚಾಲಕ, ಹೆಚ್ಚು ಸಂಪಾದನೆ