Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
Last updated: February 17, 2026 6:44 pm
Public TV
Share
2 Min Read
indian railways
SHARE

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೀದರ್ ಹಾಗೂ ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ನಡುವಿನ ವಿಶೇಷ ರೈಲುಗಳ ಸಂಚಾರವನ್ನು ವಿಸ್ತರಿಸಲು ನಿರ್ಧರಿಸಿದೆ.

ಈ ರೈಲುಗಳ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
1. ಎಸ್‌ಎಂವಿಟಿ ಬೆಂಗಳೂರಿನಿಂದ ಪ್ರತಿ ಶುಕ್ರವಾರ ಮತ್ತು ಭಾನುವಾರ ಹೊರಡುವ ರೈಲು ಸಂಖ್ಯೆ 06539 ಎಸ್‌ಎಂವಿಟಿ ಬೆಂಗಳೂರು-ಬೀದರ್ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ಈ ಮೊದಲು ಫೆ.27ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಇದೀಗ ಇದರ ಸೇವೆಯನ್ನು ಮಾ.1ರಿಂದ ಮಾ.29ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

2. ಬೀದರ್ ನಿಲ್ದಾಣದಿಂದ ಪ್ರತಿ ಶನಿವಾರ ಮತ್ತು ಸೋಮವಾರ ಹೊರಡುವ ರೈಲು ಸಂಖ್ಯೆ 06540 ಬೀದರ್ – ಎಸ್‌ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಫೆ.28ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಇದೀಗ ಇದರ ಸಂಚಾರವನ್ನು ಮಾ.2ರಿಂದ ಮಾ.30ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 9 ಟ್ರಿಪ್‌ಗಳನ್ನು ಪೂರೈಸಲಿವೆ.

3. ಬೆಂಗಳೂರಿನ ಕಂಟೋನ್ಮೆಂಟ್ ನಿಲ್ದಾಣದಿಂದ ಪ್ರತಿ ಶನಿವಾರ ಹೊರಡುವ ರೈಲು ಸಂಖ್ಯೆ 06207 ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ಈ ಮೊದಲು ಫೆ.28ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈ ರೈಲಿನ ಸೇವೆಯನ್ನು ಮಾ.7ರಿಂದ ಮಾ.28ರವರೆಗೆ ವಿಸ್ತರಿಸಲಾಗಿದೆ.

4. ಕಲಬುರಗಿಯಿಂದ ಪ್ರತಿ ಭಾನುವಾರ ಹೊರಡುವ ರೈಲು ಸಂಖ್ಯೆ 06208 ಕಲಬುರಗಿ-ಬೆಂಗಳೂರು ಕಂಟೋನ್ಮೆಂಟ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಈ ಮೊದಲು ಮಾ.1ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈ ರೈಲಿನ ಸೇವೆಯನ್ನು ಮಾ.8ರಿಂದ ಮಾ.29ರವರೆಗೆ ವಿಸ್ತರಿಸಲಾಗಿದೆ. ವಿಸ್ತೃತ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 4 ಟ್ರಿಪ್‌ಗಳನ್ನು ನಡೆಸಲಿವೆ.

ಸಾಂತ್ರಾಗಾಚಿ – ಯಲಹಂಕ ವಿಶೇಷ ರೈಲು ವಿಸ್ತರಣೆ
ಹೋಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ಅನುಕೂಲಕ್ಕಾಗಿ ಆಗ್ನೇಯ ರೈಲ್ವೆಯು ಸಾಂತ್ರಾಗಾಚಿ ಮತ್ತು ಯಲಹಂಕ ನಡುವಿನ ವಿಶೇಷ ರೈಲು ಸೇವೆಯನ್ನು ಸಹ ವಿಸ್ತರಿಸಿದೆ.

1. ಸಾಂತ್ರಾಗಾಚಿಯಿಂದ ಪ್ರತಿ ಗುರುವಾರ ಹೊರಡುವ ರೈಲು ಸಂಖ್ಯೆ 02863 ಸಾಂತ್ರಾಗಾಚಿ-ಯಲಹಂಕ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ಈ ಮೊದಲು ಫೆ.26ರವರೆಗೆ ಸಂಚರಿಸಲು ಮಾತ್ರ ನಿಗದಿಯಾಗಿತ್ತು. ಈಗ ಇದನ್ನು ಮಾ.5ರಿಂದ ಮಾ.26ರವರೆಗೆ ವಿಸ್ತರಿಸಲಾಗಿದೆ.

2. ಯಲಹಂಕದಿಂದ ಪ್ರತಿ ಶನಿವಾರ ಹೊರಡುವ ರೈಲು ಸಂಖ್ಯೆ 02864 ಯಲಹಂಕ-ಸಾಂತ್ರಾಗಾಚಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಈ ಮೊದಲು ಫೆ.28ರವರೆಗೆ ಮಾತ್ರ ನಿಗದಿಪಡಿಸಲಾಗಿತ್ತು. ಈಗ ಇದನ್ನು ಮಾ.7ರಿಂದ ಮಾ.28ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 4 ಟ್ರಿಪ್‌ಗಳನ್ನು ಪೂರೈಸಲಿವೆ.

ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ವಿಸ್ತೃತ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು.ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

 

TAGGED:bengaluruHoliSouth Western Railwayನೈಋತ್ಯ ರೈಲ್ವೆಬೀದರ್ಬೆಂಗಳೂರುಹೋಳಿ ಹಬ್ಬ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
11 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
21 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
45 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
48 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?