ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ: ಬೊಮ್ಮಾಯಿ

Public TV
2 Min Read
Basavaraj Bommai 5

ಬೆಂಗಳೂರು: ಎನ್‌ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ (Police training) ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ-2022ರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರೊಂದಿಗೆ ಪಾಲ್ಗೊಂಡು, ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ತಳ ಹಂತ ಪೊಲೀಸರು ಹಾಗೂ ಐಪಿಎಸ್‌ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

bengaluru basavaraj bommai police

ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನದಲ್ಲಿ ಸಾಕ್ಷಿಗಳನ್ನು ಬಿಟ್ಟು ಹೋಗಿರುತ್ತಾರೆ. ಗೃಹ ಇಲಾಖೆ ಪೊಲೀಸರು ಬಳಸುವ ತಂತ್ರಜ್ಞಾನವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್‌ನಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನೀಕರಣ ಮಾಡಿದ್ದೇವೆ. ಫಾರೆನ್ಸಿಕ್ ಲ್ಯಾಬ್ ಆಧುನೀಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್‌ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಠ 2 ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದರು.

bengaluru basavaraj bommai police 1

ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕನಿಷ್ಠ ಕ್ರಮ ಕೈಗೊಳ್ಳಲೇಬೇಕು. ಪೊಲೀಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ? ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ಒತ್ತಡಗಳ ನಡುವೆ ಕರ್ನಾಟಕ ಪೊಲಿಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ ಎಂದು ಸಂತಸ ವ್ಯಕ್ತಪಡಿಸಿದರು.

BASAVARAJ BOMMAI 2

ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ ಹೊರಗುಳಿಯಬಾರು. ಈ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಡಿಕ್ಷನರಿಯಲ್ಲಿ ಕಾಂಗ್ರೆಸ್‍ನ ಅರ್ಥವನ್ನು ಹೊಡೆದಾಟ, ಬಡಿದಾಟವೆಂದು ಬರೆಯಬೇಕು: ಪ್ರಹ್ಲಾದ್ ಜೋಶಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *