ನವದೆಹಲಿ: ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಊಹಾಪೋಹವನ್ನು ಭಾರತೀಯ ರಾಯಭಾರಿ ಕಚೇರಿ ಸಂಪೂರ್ಣವಾಗಿ ತಳ್ಳಿ ಹಾಕಿದೆ.
ಈ ಬಗ್ಗೆ ಮಾತನಾಡಿ, ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಭಾರತವು ಸಂಪೂರ್ಣ ಬೆಂಬಲವನ್ನು ಹೊಂದಿದೆ. ಆದರೆ ಸೈನ್ಯವನ್ನು ನವದೆಹಲಿಯಿಂದ ಕೊಲಂಬೊಗೆ ಕಳುಹಿಸಿಲ್ಲ. ಈ ಎಲ್ಲಾ ಊಹಾಪೋಹಗಳು ಸುಳ್ಳು ಮತ್ತು ನಕಲಿಯದ್ದಾಗಿದೆ ಎಂದರು.
Advertisement
Advertisement
ಸೋಮವಾರ ರಾಜೀನಾಮೆ ನೀಡಿದ ನಂತರ ಮಹಿಂದಾ ರಾಜಪಕ್ಸೆ ಎಲ್ಲಿದ್ದಾರೆ ಎಂದು ಪ್ರಶ್ನೆ ಕಾಡಿತ್ತು. ಮಹಿಂದ ಅವರು ತಮ್ಮ ಕಚೇರಿ ಹಾಗೂ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ತೊರೆದಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಧರೆಗುರುಳಿದ ಪಾರಂಪರಿಕ ವೃಕ್ಷ ದೊಡ್ಡಾಲದ ಮರ!
Advertisement
ಈ ಹಿನ್ನೆಲೆಯಲ್ಲಿ ಭಾರತವು ತನ್ನ ಸೈನ್ಯವನ್ನು ಶ್ರೀಲಂಕಾಕ್ಕೆ ಕಳುಹಿಸುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಊಹಾಪೋಹದ ವರದಿಗಳು ಸ್ಪಷ್ಟವಾಗಿ ನಿರಾಕರಿಸುತ್ತೇವೆ. ಈ ವರದಿಗಳು ಮತ್ತು ಅಂತಹ ಅಭಿಪ್ರಾಯಗಳು ಭಾರತ ಸರ್ಕಾರದ ಸ್ಥಾನಕ್ಕೆ ಅನುಗುಣವಾಗಿಲ್ಲ ಭಾರತೀಯ ಮಿಷನ್ ಟ್ವೀಟ್‍ನಲ್ಲಿ ಹೇಳಿದೆ.
Advertisement
ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಭಾರತವು ಸಂಪೂರ್ಣ ಬೆಂಬಲವನ್ನು ಹೊಂದಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ನಿನ್ನೆ ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರನ್ನು ಗುಂಡಿಕ್ಕಿ ಕೊಲ್ಲಿ: ಶ್ರೀಲಂಕಾ ರಕ್ಷಣಾ ಸಚಿವಾಲಯ ಆದೇಶ