ಮುಂಬೈ: ಮಾತುಬಾರದ ಬಾಲಕನನ್ನು ಕೊಂದು ಗೋಣಿ ಚೀಲದೊಳಗೆ ತುಂಬಿ ಬಿಸಾಕಿರುವ ಘಟನೆ ಪುಣೆಯಲ್ಲಿ ನಡೆದಿದೆ.
13 ವರ್ಷದ ಬಾಲಕ ಮೃತನಾಗಿದ್ದಾನೆ. ಈತನಿಗೆ ಮಾತು ಬರುತ್ತಿರಲಿಲ್ಲ. ಬಾಲಕನನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದು, ಕೊತ್ರುದ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಇದೊಂದು ಕೊಲೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿಕೆಶಿ
ಸ್ಥಳಕ್ಕೆ ಕೊತ್ರುಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಣಿ ಚೀಲದಲ್ಲಿ ಶವ ಪತ್ತೆಯಾಗಿದೆ ಕೊತ್ರೂಡ್ನ ಪೌಡ್ ರೋಡ್ ಪ್ರದೇಶದ ಕಾಲೇಜಿನ ಹಿಂಭಾಗದಲ್ಲಿ ಬ್ಯಾಗ್ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕನ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದಿದ್ದಾರೆ. ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಆದರೆ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಕೊತ್ರುಡ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.