ವಿಶ್ವಸಂಸ್ಥೆಯ (United Nations) ವಾರ್ಷಿಕ ಸಭೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಈ ಸಭೆಯಲ್ಲಿ ಕನ್ನಡ ಹೆಮ್ಮೆಯ ನಿರ್ದೇಶಕ, ನಟ, ನಿರ್ಮಾಪಕ ರಿಷಬ್ ಶೆಟ್ಟಿ(Rishabh Shetty) ಕೂಡ ಪಾಲ್ಗೊಳ್ಳುತ್ತಿದ್ದಾರೆ. ವಿವಿಧ ದೇಶಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಕುರಿತು ಮಾತನಾಡುತ್ತಿದ್ದು, ರಿಷಬ್ ಕೂಡ ಪ್ರಚಲಿತ ವಿದ್ಯಮಾನಗಳ ಕುರಿತು ಮತ್ತು ಕಾಂತಾರ (Kantara) ಚಿತ್ರದ ಕುರಿತು ವಿಷಯ ಮಂಡಿಸಲಿದ್ದಾರೆ.
Advertisement
ಸಾಮಾನ್ಯವಾಗಿ ಈ ಸಭೆಯಲ್ಲಿ ಹೆಚ್ಚು ಇಂಗ್ಲಿಷ್ ಭಾಷೆಯನ್ನು ಬಳಸುವುದು ವಾಡಿಕೆ. ಆದರೆ, ರಿಷಬ್ ಈ ಸಭೆಯಲ್ಲಿ ಕನ್ನಡದಲ್ಲೇ (Kannada) ಭಾಷಣ ಮಾಡಲಿದ್ದಾರೆ. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ಪಾತ್ರರಾಗಲಿದ್ದಾರೆ. ಈಗಾಗಲೇ ಈ ಸಭೆಯಲ್ಲಿ ಸದ್ಯ ಜಗತ್ತು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ರಿಷಬ್ ಯಾವೆಲ್ಲ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಲೈಗರ್ ಬ್ಯೂಟಿ ಜೊತೆ ಹಸೆಮಣೆ ಏರಲಿದ್ದಾರೆ `ಆಶಿಕಿ 2′ ಹೀರೋ
Advertisement
Advertisement
ರಿಷಬ್ ಆಪ್ತರು ಹೇಳುವಂತೆ ಕಾಂತಾರ ಸಿನಿಮಾವನ್ನೇ ಆಧಾರವಾಗಿಟ್ಟುಕೊಂಡು, ಕರ್ನಾಟಕ ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕು ಹೀಗೆ ನಾಡಿ ಭವ್ಯ ಸಂಸ್ಕೃತಿಯ ಕುರಿತು ಮಾತನಾಡಲಿದ್ದಾರಂತೆ. ಜೊತೆಗೆ ಭಾರತೀಯ ಸಿನಿಮಾ ರಂಗ ಬೆಳೆದು ಬಂದ ಬಗೆಯನ್ನೂ ವಿವರಿಸಲಿದ್ದಾರಂತೆ. ವಿಶ್ವಸಂಸ್ಥೆಯ ವೇದಿಕೆಯ ಮೇಲೆ ಭಾರತೀಯ ಸಂಸ್ಕೃತಿಯ ಅನಾವರಣ ರಿಷಬ್ ಮೂಲಕ ಆಗುತ್ತಿದೆ.
Advertisement
ಕಾಂತಾರ ಸಿನಿಮಾದ ಮೂಲಕ ಈಗಾಗಲೇ ಜಗತ್ತಿಗೆ ಕರ್ನಾಟಕದ ಸಂಸ್ಕೃತಿಯನ್ನು ಪರಿಚಯಿಸಿದ ರಿಷಬ್, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹಲವು ರಾಷ್ಟ್ರಗಳ ಪ್ರತಿನಿಧಿಗಳ ಮುಂದೆ ಕರ್ನಾಟಕದ ಅದರಲ್ಲೂ ದಕ್ಷಿಣ ಕನ್ನಡದ ಶ್ರೀಮಂತ ಸಂಸ್ಕೃತಿಯನ್ನು ರಿಷಬ್ ಹಂಚಿಕೊಳ್ಳಲಿದ್ದಾರೆ. ಈ ವಿಷಯ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದ್ದು, ರಿಷಬ್ ಮಾತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.