ಧಾರವಾಡ: ನಗರದ ಹೊರವಲಯಲದಲ್ಲಿ ಆಲ್ಟೋ ಕಾರ್ ಹಾಗೂ ಕ್ಯಾಂಟರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಪ್ರಕಾಶ ಚಕ್ಕೇದಾರ (45) ಸಾವನ್ನಪ್ಪಿದ ವ್ಯಕ್ತಿ. ವೇಗವಾಗಿ ಕ್ಯಾಂಟರ್ ವಾಹನ ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೋಗುತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಆಲ್ಟೋ ಕ್ಯಾಂಟರ್‍ಗೆ ಡಿಕ್ಕಿ ಹೊಡಿದಿದೆ.
ಗುದ್ದಿದ ರಭಸಕ್ಕೆ ಪ್ರಕಾಶ್ ಚಕ್ಕೇದಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.