ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ (Bengaluru) ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ.
ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ
ಮೆಜೆಸ್ಟಿಕ್‌ನಿಂದ…
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ವಿಶೇಷ ಬಸ್ ಸಂಚರಿಸಲಿವೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ – ಗಂಡನ ಹಿಂಸೆ ತಾಳಲಾರದೆ ತವರು ಸೇರಿದ್ದ ಪತ್ನಿ
ಸ್ಯಾಟಲೈಟ್ ಬಸ್ ನಿಲ್ದಾಣದಿಂದ
ಮಂಡ್ಯ,ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವೀರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್ ಗಳು ಲಭ್ಯವಿರಲಿದೆ. ಇದನ್ನೂ ಓದಿ: ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!
ಶಾಂತಿನಗರ ಬಸ್ ನಿಲ್ದಾಣದಿಂದ
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಝಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.