ಹೈದರಾಬಾದ್: ಹೈದರಾಬಾದ್ನಿಂದ (Hyderabad) ತಿರುಪತಿಗೆ (Tirupati) ಹೊರಟಿದ್ದ ಸ್ಪೈಸ್ಜೆಟ್ ವಿಮಾನವು (SpiceJet flight) ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ಸಮಸ್ಯೆಯಿಂದ ವಾಪಸ್ ಆಗಿದೆ.
ವಿಮಾನ ತಾಂತ್ರಿಕ ದೋಷದಿಂದಾಗಿ ನಗರಕ್ಕೆ ಹಿಂತಿರುಗಬೇಕಾಯಿತು ಎಂದು ಮೂಲಗಳು ತಿಳಿಸಿವೆ. ಬೆಳಗ್ಗೆ 6:10 ಕ್ಕೆ ಹೊರಡಬೇಕಿದ್ದ ಎಸ್ಜಿ 2696 ವಿಮಾನ ಬೆಳಗ್ಗೆ 6:19 ಕ್ಕೆ ಹೊರಟು 7:40 ಕ್ಕೆ ತಿರುಪತಿಯಲ್ಲಿ ಇಳಿಯಬೇಕಿತ್ತು. ಆದರೆ, ವಿಮಾನವು ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಯೂಟರ್ನ್ ಹೊಡೆದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಇದನ್ನೂ ಓದಿ: ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್ಪೋರ್ಟ್ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್
ಹೈದರಾಬಾದ್-ತಿರುಪತಿ ವಿಮಾನವನ್ನು ನಿರ್ವಹಿಸುತ್ತಿದ್ದ Q400 ವಿಮಾನವು ಟೇಕಾಫ್ ಆದ ನಂತರ AFT ಬ್ಯಾಗೇಜ್ ಬಾಗಿಲಿನಿಂದ ಬೆಳಕು ಹೊಮ್ಮಿತು. ಕ್ಯಾಬಿನ್ ಒತ್ತಡವು ಸಾಮಾನ್ಯವಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ, ಪೈಲಟ್ಗಳು ಹೈದರಾಬಾದ್ಗೆ ಹಿಂತಿರುಗಲು ನಿರ್ಧರಿಸಿದರು. ವಿಮಾನ ಸುರಕ್ಷಿತವಾಗಿ ಇಳಿಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು ಎಂದು ಸ್ಪೈಸ್ಜೆಟ್ ತಿಳಿಸಿದೆ.
ವಿಮಾನವು ತುರ್ತು ಭೂಸ್ಪರ್ಶ ಮಾಡಲಿಲ್ಲ. ತಿರುಪತಿಗೆ ಮುಂದಿನ ಪ್ರಯಾಣಕ್ಕಾಗಿ ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದರ ಕುರಿತು ವಿಮಾನಯಾನ ಸಂಸ್ಥೆ ಮಾಹಿತಿಯನ್ನು ನೀಡಿಲ್ಲ. ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್