ನವದೆಹಲಿ: ದೆಹಲಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸ್ಪೈಸ್ ಜೆಟ್ (Spice Jet) ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.
ದೆಹಲಿ- ಹೈದರಾಬಾದ್ ಮಾರ್ಗದ (Delhi to Hyderabad) SG-8133 ವಿಮಾನದಲ್ಲಿ ಈ ಘಟನೆ ನಡೆದಿದೆ. ಸ್ಪೈಸ್ ಜೆಟ್ ಭದ್ರತಾ ಅಧಿಕಾರಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ನಂತರ ಅಬ್ಸರ್ ಆಲಂ ಪ್ರಯಾಣಿಕನನ್ನ ಬಂಧಿಸಲಾಗಿದೆ. ಪ್ರಯಾಣಿಕನ ವಿರುದ್ಧ ಸೆಕ್ಷನ್ 354A ಅಡಿಯಲ್ಲಿ ಪ್ರಕರಣ (FIR) ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Advertisement
#WATCH | "Unruly & inappropriate" behaviour by a passenger on the Delhi-Hyderabad SpiceJet flight at Delhi airport today
The passenger and & a co-passenger were deboarded and handed over to the security team at the airport pic.twitter.com/H090cPKjWV
— ANI (@ANI) January 23, 2023
Advertisement
ಸ್ಪೈಸ್ ಜೆಟ್‌ನಲ್ಲಿ ಪ್ರಯಾಣಿಕರಿಬ್ಬರು ಅಶಿಸ್ತಿನ ವರ್ತನೆ ತೋರಿದ ನಂತರ ಅವರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಈ ವೀಡಿಯೋ ಸದ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಪ್ರಯಾಣಿಕರು ಕ್ಯಾಬಿನ್ ಸಿಬ್ಬಂದಿಯ ಮೇಲೆ ಕೂಗಾಡುತ್ತಿರುವುದನ್ನು ಕಾಣಬಹುದು. ಇದನ್ನೂ ಓದಿ: ಮಾನಸಿಕ ಖಿನ್ನತೆಯೇ ನಟ ಸುಧೀರ್ ಆತ್ಮಹತ್ಯೆಗೆ ಕಾರಣ
Advertisement
Advertisement
ಅಧಿಕಾರಿಗಳ ದೂರಿನ ಪ್ರಕಾರ ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಕಿರಕುಳ ನೀಡಿದ್ದರು. ಇದರಿಂದ ವಿಮಾನದಿಂದ ಕೆಳಗಿಳಿಸಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಯಿತು ಎನ್ನಲಾಗಿದೆ. ಇದನ್ನೂ ಓದಿ: ‘ಲವ್ ಬರ್ಡ್ಸ್’ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್
ಇತ್ತೀಚೆಗೆ ವಿಮಾನಗಳಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವ ಪ್ರಕರಣಗಳು ಒಂದಿಲ್ಲೊಂದು ಬೆಳಕಿಗೆ ಬರುತ್ತಲೇ ಇವೆ. ಇತ್ತೀಚೆಗಷ್ಟೇ ಏರ್‌ಇಂಡಿಯಾ (Air India) ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ಗೋ ಫಸ್ಟ್ ವಿಮಾನದಲ್ಲಿ, ಇದೀಗ ಸ್ಪೈಸ್ ಜೆಟ್‌ನಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k