ನವದೆಹಲಿ: ಆರ್ಥಿಕ ಸಂಕಷ್ಟ (Financial Crisis) ಎದುರಿಸುತ್ತಿರುವ ಸ್ಪೈಸ್ ಜೆಟ್ (Spice Jet) ವಿಮಾನಯಾನ ಸಂಸ್ಥೆ 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳ ಕಾಲ ಕಡ್ಡಾಯ ರಜೆ ಘೋಷಿಸಿದೆ.
ಹಣಕಾಸು ಸೇರಿದಂತೆ ಕಾನೂನು ಮತ್ತು ಗುತ್ತಿಗೆದಾರರ ಸಮಸ್ಯೆಗಳನ್ನು ಸ್ಪೈಸ್ ಜೆಟ್ ಎದುರಿಸುತ್ತಿದೆ. ಇದರ ಪರಿಣಾಮ ವಿಮಾನಗಳು ಕಡಿಮೆ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆರ್ಥಿಕ ಸಮಸ್ಯೆಯನ್ನು ಸರಿದೂಗಿಸಲು 150 ಕ್ಯಾಬಿನ್ ಸಿಬ್ಬಂದಿಯನ್ನು ಮೂರು ತಿಂಗಳವರೆಗೆ ವೇತನವಿಲ್ಲದೆ ರಜೆಯ ಮೇಲೆ ಕಳುಹಿಸಲಾಗುವುದು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು
ಈ ಮೂರು ತಿಂಗಳ ಅವಧಿಯಲ್ಲಿ ಕ್ಯಾಬಿನ್ ಸಿಬ್ಬಂದಿಯ ಎಲ್ಲಾ ಆರೋಗ್ಯ ಸಂಬಂಧಿತ ಪ್ರಯೋಜನಗಳನ್ನು ಸಂಸ್ಥೆ ಒದಗಿಸಲಿದೆ. ಅಲ್ಲದೇ ಸ್ಪೈಸ್‍ಜೆಟ್‍ನ ಉದ್ಯೋಗಿಗಳ ಸ್ಥಾನಮಾನವನ್ನು ಈ ಅವಧಿಯಲ್ಲಿ ಹೊಂದಿರುತ್ತಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಮೂರು ತಿಂಗಳ ಬಳಿಕ ನಮ್ಮ ಸಿಬ್ಬಂದಿಯನ್ನು ಕರ್ತವ್ಯಕ್ಕೆ ತೆಗೆದುಕೊಳ್ಳಲಿದ್ದೇವೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಪ್ರಸ್ತುತ ಸ್ಪೈಸ್‍ಜೆಟ್‍ನ ಸುಮಾರು 22 ವಿಮಾನಗಳ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ಹಿಮಾಚಲ ತತ್ತರ – ಮಂತ್ರಿಗಳು, ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ಸಂಬಳ ಕಟ್