Connect with us

Corona

ದೇಶದಲ್ಲಿ 25 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ- 18 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

Published

on

ನವದೆಹಲಿ: ದೇಶದಲ್ಲಿ ಚೀನಿ ವೈರಸ್ ಕೋವಿಡ್ 19 ತನ್ನ ರೌದ್ರನರ್ತನ ತೋರುತ್ತಿದ್ದು, ನಿನ್ನೆ ಒಂದೇ ದಿನ 65,002 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕಳೆದ 24 ಗಂಟೆಯಲ್ಲಿ 996 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ 6,68,220 ಸಕ್ರಿಯ ಪ್ರಕರಣಗಳಿದ್ದು, 18,08,937 ಮಂದಿ ಕೊರೊನಾ ವೈರಸ್ ಗೆದ್ದು ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ ದೇಶದಲ್ಲಿ 49,036 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 8,68,679 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಗಿದೆ. ಈ ಮೂಲಕ 2,85,63,095 ಮಂದಿಯನ್ನು ಈವರೆಗೆ ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮಾಹಿತಿ ನೀಡಿದೆ.

Click to comment

Leave a Reply

Your email address will not be published. Required fields are marked *