ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರವಾಗಿ, ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪೋಷಕರಿಗೆ ಕೋಲ್ಕತ್ತಾ (Kolkata) ಪೊಲೀಸರು ಲಂಚ ನೀಡಿದ್ದರು ಎಂಬ ಆರೋಪವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಳ್ಳಿಹಾಕಿದ್ದಾರೆ. ಆ ರೀತಿಯ ಘಟನೆಯೇ ನಡೆದಿಲ್ಲ. ಇದು ಸರ್ಕಾರದ ವಿರುದ್ಧ ದೂಷಣೆ ಎಂದು ಪ್ರತಿಪಾದಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು. ಅದನ್ನು ನಾವು ತಕ್ಷಣ ನಿರಾಕರಿಸಿದ್ದೇವೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದರು. ಇದನ್ನೂ ಓದಿ: ಒಪ್ಪಿಗೆ ಪತ್ರ ಇಲ್ಲದೇ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷೆ ಹೇಗೆ ನಡೆಯಿತು? – ಬಂಗಾಳ ಸರ್ಕಾರಕ್ಕೆ ಸುಪ್ರೀಂ ಚಾಟಿ
Advertisement
Advertisement
ಇದಕ್ಕೆ ತಿರುಗೇಟು ನೀಡಿರುವ ಸಿಎಂ ಮಮತಾ ಬ್ಯಾನರ್ಜಿ, ಮೃತ ವೈದ್ಯೆಯ ಕುಟುಂಬಕ್ಕೆ ನಾನು ಯಾವತ್ತೂ ಹಣ ನೀಡಿಲ್ಲ. ಇದು ಅಪಪ್ರಚಾರವಲ್ಲದೆ ಬೇರೇನೂ ಅಲ್ಲ. ಹಣವು ಎಂದಿಗೂ ಜೀವನವನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ನಾನು ಪೋಷಕರಿಗೆ ಈ ಹಿಂದೆ ಹೇಳಿದ್ದೆ. ತಮ್ಮ ಮಗಳ ನೆನಪಿಗಾಗಿ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ಅವರು ಬಯಸಿದರೆ ಸರ್ಕಾರವು ಅವರ ಪರವಾಗಿ ನಿಂತಿದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.
Advertisement
ಪ್ರತಿಭಟನೆಯ ನಂತರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಲು ಮುಂದಾದರು. ಆದರೆ ದುರ್ಗಾ ಪೂಜೆಗೆ ಮುಂಚಿತವಾಗಿ ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ರಾಜೀನಾಮೆ ಅಂಗೀಕಾರಕ್ಕೆ ನಿರಾಕರಿಸಿದೆ. ಪೊಲೀಸ್ ಅಧಿಕಾರಿಗಳು ಲಂಚ ನೀಡುವ ಪ್ರಯತ್ನ ಇದೊಂದು ಹಸಿ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು – ಅಮೆರಿಕದಲ್ಲಿ ರಾಹುಲ್ ಗಾಂಧಿ ಭಾಷಣ
Advertisement
ಆ.9 ರಂದು ಆರ್ಜಿ ಕರ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮತ್ತು ಕೊಲೆ ಮಾಡಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಿವಿಲ್ ಸ್ವಯಂಸೇವಕನನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸದ್ಯ ಸಿಬಿಐ ತನಿಖೆ ನಡೆಸುತ್ತಿದ್ದು, ಅದು ಅಂತಿಮ ಹಂತದಲ್ಲಿದೆ.