ಹಾಸನ: ಆರ್‌ಎಸ್‌ಎಸ್ (RSS) ಬಗ್ಗೆ ಮಾತನಾಡಿದ್ದಕ್ಕೆ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಕ್ಷಮೆಯಾಚಿಸಿದ್ದಾರೆ.
ಹಾಸನ (Hassan) ಜಿಲ್ಲೆ ಸಕಲೇಶಪುರದಲ್ಲಿ (Sakleshpura) ನಡೆದ ಜೆಡಿಎಸ್-ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ನೀವು ಕ್ಷಮಿಸುವುದಾದರೆ ಹೇಳುತ್ತಿದ್ದೇನೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ. ಇಲ್ಲಿ ಕುಳಿತಿರುವ ಆರ್‌ಎಸ್‌ಎಸ್ ಮುಖಂಡರು, ಕಾರ್ಯಕರ್ತರು ಇದ್ದರೆ ಅವರನ್ನು ಕ್ಷಮಿಸಿ ಅಂತ ಕೇಳುತ್ತೇನೆ. ನಾನು ಒಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ ಇವತ್ತು ಅರಿವಾಗಿದೆ. ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ
- Advertisement
ನಾನು ಆಯ್ಕೆಯಾದ ಸಂದರ್ಭದಲ್ಲಿ ಕೇವಲ 27 ವರ್ಷ ವಯಸ್ಸು. ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರು ಪ್ರಶ್ನೆ ಮಾಡಲ್ಲ. ಪ್ರಜ್ವಲ್ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ ಅಂತ ನಮ್ಮ ರಾಧಾ ಮೋಹನ್ ದಾಸ್‌ಜಿ ಹೇಳಿದ್ದಾರೆ. ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಇದು ಅಂತ ಅವರು ಹೇಳಿದ್ದಾರೆ. ಜೆಡಿಎಸ್-ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಗೌರವಿಸಿ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲು!
- Advertisement
ನಾನು ಐದು ವರ್ಷದಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ. ಒಬ್ಬ ಯುವಕ ನಡೆಯುವಾಗ ಎಡವುತ್ತಾನೆ. ಈಗ ಎಡವಿರಬಹುದು. ಸಣ್ಣಪುಟ್ಟ ವಿಚಾರಗಳಲ್ಲಿ ಎಡವಿದ್ರೆ ತಪ್ಪು ತಿದ್ದಿಕೋ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ. ಒಬ್ಬ ಸಂಸದನಾಗಿ ಅಲ್ಲ, ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 400 ಸೀಟ್ ಗೆಲ್ಲಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು. ಅದರಲ್ಲಿ ನಾನೊಬ್ಬ ಇರಲು ಅವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ರಾಯಚೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ