ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ (Rian in Bengaluru) ಮಳೆಯಾಗುತ್ತಿದ್ದು, ಬೆಳಗ್ಗೆನೇ ಜನ ಕೊಡೆ ಹಿಡಿದು ಹೊರಬರುವಂತಾಗಿದೆ.
ಚೆನ್ನೈನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನಗರದಲ್ಲಿ ತುಂತುರು ಮಳೆಯಾಗುತ್ತಿದೆ. ಚೆನ್ನೈ ಸೇರಿದಂತೆ ತಮಿಳುನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ.
Advertisement
ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮನ್ಸೂಚನೆ ಸಿಕ್ಕಿದ್ದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಹೆಂಡತಿ ನನ್ನ ಮಾತು ಕೇಳುತ್ತಿಲ್ಲ, ದಯಮಾಡಿ ಪರಿಹರಿಸಿ- ಶಾಸಕರಿಗೆ ವ್ಯಕ್ತಿ ದೂರು
Advertisement
Advertisement
ಬೆಳಗ್ಗೆನೇ ಸುರಿಯುತ್ತಿರುವ ತುಂತುರು ಮಳೆಯಿಂದಾಗಿ ಶಾಲಾ, ಕಾಲೇಜು ಹಾಗೂ ಕೆಲಸಕ್ಕೆ ಹೋಗೋರಿಗೆ ಕೊಂಚ ಕಿರಿಕಿರಿ ಉಂಟು ಮಾಡಿದೆ. ಆದರೂ ಜನ ಕೊಡೆ ಹಿಡಿದು ತಮ್ಮ ತಮ್ಮ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಇತ್ತ ಪುಟ್ಟ ಪುಟ್ಟ ಮಕ್ಕಳನ್ನ ಶಾಲೆಗೆ ಬಿಡಲು ಪೋಷಕರು ಹರಸಾಹಸ ಪಡುತ್ತಿದ್ದಾರೆ. ಮಕ್ಕಳು ಮಳೆಯಲ್ಲಿ ನೆನೆಯದಂತೆ ಬೆಚ್ಚನೆ ಮಾಡಿ ಶಾಲೆಗಳಿಗೆ ಪೋಷಕರು ಕಳುಹಿಸುತ್ತಿದ್ದಾರೆ.
Advertisement
ಬುಧವಾರ (ನಾಳೆ) ಬೆಳಗ್ಗೆ ವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಅಲ್ಲದೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.