ಮುಂಬೈ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಿಎಚ್‍ಡಿ ವಿದ್ಯಾರ್ಥಿಯೊಬ್ಬ ತನಗೆ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿ ಹತ್ಯೆಗೈಯ್ಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ (Aurangabad) ನಡೆದಿದೆ. ಇದೀಗ ಇಬ್ಬರಿಗೂ ಸುಟ್ಟ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
Advertisement
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಬ್ಬರೂ ಪ್ರಾಣಿಶಾಸ್ತ್ರದ (Zoology) ಪಿಎಚ್‍ಡಿ ವಿದ್ಯಾರ್ಥಿಗಳಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಲ್ಲಿ (Dr Babasaheb Ambedkar Marathwada University) ಅಧ್ಯಯನ ಮಾಡುತ್ತಿದ್ದರು. ಇದನ್ನೂ ಓದಿ: ನೋವಿನಿಂದ ಚೀರಾಡಿದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಸಿಬ್ಬಂದಿ – ಅಪರಿಚಿತನ ಸಹಾಯದಿಂದ ರಸ್ತೆಯಲ್ಲೇ ಮಹಿಳೆಗೆ ಹೆರಿಗೆ
Advertisement
Advertisement
ಹನುಮಾನ್ ತೆಕಡಿಯಲ್ಲಿರುವ ಸರ್ಕಾರಿ ಫೋರೆನ್ಸಿಕ್ ಕಾಲೇಜಿನ ಬಯೋಫಿಸಿಕ್ಸ್ ವಿಭಾಗದ ಕ್ಯಾಬಿನ್‍ನಲ್ಲಿ ಯುವತಿ ತನ್ನ ಪ್ರಾಜೆಕ್ಟ್ ಮಾಡುತ್ತಿದ್ದಾಗ ಆರೋಪಿ ಒಳಗೆ ನುಗ್ಗಿದ್ದಾನೆ. ನಂತರ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದೇಕೆ ಎಂದು ಪ್ರಶ್ನಿಸಲು ಆರಂಭಿಸಿದ್ದಾನೆ. ನಂತರ ತನ್ನ ಮೇಲೆ ಹಾಗೂ ಯುವತಿಯ ಮೇಲೆ ಪೆಟ್ರೋಲ್ ಸುರಿದು ಲೈಟರ್‍ನಿಂದ ಬೆಂಕಿ ಹಚ್ಚಿಕೊಂಡಿದ್ದಾನೆ. ನಂತರ ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ ಎಂದು ಬೇಗಂಪುರ ಠಾಣೆಯ ಪಿಐ ಪ್ರಶಾಂತ್ ಪೋತದಾರ ತಿಳಿಸಿದ್ದಾರೆ.
Advertisement
ಇದೀಗ ಇಬ್ಬರನ್ನು ಚಿಕಿತ್ಸೆಗಾಗಿ ಔರಂಗಾಬಾದ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಗೆ 90% ಸುಟ್ಟ ಗಾಯಗಳಾಗಿದ್ದರೆ, ಯುವತಿಗೆ 55% ಸುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307, 326A, 354D, 506,34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ – ಜಾಗೃತಿ ಮೂಡಿಸಲು ತಹಶಿಲ್ದಾರ್‌ಗೆ ಗ್ರಾಮಸ್ಥರ ಮನವಿ