ತುಮಕೂರು: ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾಡಿರುವ ಟ್ವಿಟ್ ಉದ್ದೇಶಿಸಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್, ಎಚ್.ಡಿ.ಕೆ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಸಿದ್ದರಾಮಯ್ಯರಿಗೆ ಹೇಳುವ ಮೊದಲು ನಾವೆಷ್ಟು ಪ್ರಾತಿನಿಧ್ಯ ನೀಡಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಬದ್ಧತೆ ಬಗ್ಗೆ ನಮ್ಮ ಆತ್ಮವಿಮರ್ಶೆಯನ್ನು ನಾವು ಮಾಡಿಕೊಳ್ಳಬೇಕು. ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಅಲ್ಪ ಸಂಖ್ಯಾತ ಅಭ್ಯರ್ಥಿಯನ್ನು ಕಣಕಿಳಿಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ
Advertisement
Advertisement
ತುಮಕೂರು ನಗರದಲ್ಲಿ 45-50 ಸಾವಿರ ಮುಸ್ಲಿಮರ ಮತ ಇದೆ. ಆದರೂ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ. ಇಂತಹದರಲ್ಲಿ 10-15 ಸಾವಿರ ಮತ ಇರುವ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರಿಗೆ ಟಿಕೆಟ್ ಕೊಟ್ಟರೆ ಯಾವ ಪ್ರಯೋಜನವೂ ಇಲ್ಲ. ಬಸವ ಕಲ್ಯಾಣದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿ ಏನು ಪ್ರಯೋಜನವಾಯ್ತು ಎಂದು ಸ್ವಪಕ್ಷದ ನಿರ್ಧಾರವನ್ನೇ ಎಸ್.ಆರ್ ಶ್ರೀನಿವಾಸ್ ಪ್ರಶ್ನಿಸಿದರು. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!