ಬಹುಭಾಷಾ ನಟಿ ಶ್ರೀಲೀಲಾ(Sreeleela) ಹಾಗೂ ಯುವ ಕ್ರಿಕೆಟಿಗ ತಿಲಕ್ ವರ್ಮಾ (Tilak Varma) ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲ ವದಂತಿಗಳಿಗೆ ಶ್ರೀಲೀಲಾ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ.
ವದಂತಿಗಳಿಗೆ ಪ್ರತಿಕ್ರಿಯಿಸಿದ ಶ್ರೀಲೀಲಾ ತಾಯಿ ಡಾ. ಸ್ವರ್ಣಲತಾ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳೆಲ್ಲ ಸುಳ್ಳು. ಶ್ರೀಲೀಲಾ ತನ್ನ ಶಿಕ್ಷಣ ಮತ್ತು ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತ್ರ ಗಮನ ಹರಿಸಿದ್ದಾಳೆ. ಜೂನ್‌ನಲ್ಲಿ ನಡೆಯಲಿರುವ ನೀಟ್-ಪಿಜಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಶ್ರೀಲೀಲಾಗೆ ಮದುವೆ ಅಥವಾ ಪ್ರೀತಿ ಬಗ್ಗೆ ಯಾವುದೇ ಯೋಚನೆ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಜೊತೆಗೂ ಶ್ರೀಲೀಲಾ ಡೇಟಿಂಗ್(Dating) ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಇದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಮತ್ತು ಕಾರ್ತಿಕ್ ತಾಯಿ ಇಬ್ಬರೂ ವೈದ್ಯರು. ಆದ್ದರಿಂದ ಎರಡೂ ಕುಟುಂಬದವರು ಒಳ್ಳೆಯ ಬಾಂಧವ್ಯ ಹೊಂದಿದ್ದೇವೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದರು.

ಧರ್ಮಶಾಲಾದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ (IPL Match) ಶ್ರೀಲೀಲಾ ಅವರ ತಾಯಿ ಕಾಣಿಸಿಕೊಂಡ ನಂತರ, ಶ್ರೀಲೀಲಾ ಮತ್ತು ತಿಲಕ್ ವರ್ಮಾ ನಡುವಿನ ಸಂಬಂಧದ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾದವು. ಬಳಿಕ ಶ್ರೀಲೀಲಾ ಕೂಡ ಕ್ರಿಕೆಟ್ ಪಂದ್ಯವೊಂದರಲ್ಲಿ ಭಾಗವಹಿಸಿದ್ದರು ಎಂಬ ಸುದ್ದಿ ಹರಡಿದ್ದು, ಆ ವೇಳೆ ಅವರ ತಂಡದ ಸದಸ್ಯರೊಬ್ಬರು ‘ತಿಲಕ್’ ಹೆಸರಿನ ಜೆರ್ಸಿ ಧರಿಸಿದ್ದಾರಂತೆ ಎಂಬ ಮಾತು ಮತ್ತಷ್ಟು ಚರ್ಚೆಗೆ ಕಾರಣವಾಯಿತು. ಇದನ್ನೂ ಓದಿ: ಹೈದರಾಬಾದ್ ಆರ್‌ಸಿಬಿ ಮ್ಯಾಚ್ ಟಿಕೆಟ್ ಬೆಲೆ ಸಿಕ್ಕಾಪಟ್ಟೆ ಏರಿಕೆ – ಕೆಲವೇ ನಿಮಿಷಗಳಲ್ಲಿ ಸೋಲ್ಡ್ ಔಟ್
ಬೆಂಗಳೂರಿನಲ್ಲಿ ಬೆಳೆದ ಶ್ರೀಲೀಲಾ, ಕನ್ನಡದ ‘ಕಿಸ್’ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡರು. ಬಳಿಕ ತೆಲುಗು ಚಿತ್ರರಂಗದಲ್ಲಿ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ಮತ್ತೊಂದೆಡೆ, ತಿಲಕ್ ವರ್ಮಾ ಭಾರತ ತಂಡದ ಉದಯೋನ್ಮುಖ ಕ್ರಿಕೆಟಿಗರಲ್ಲೊಬ್ಬರಾಗಿದ್ದು, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.

