ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಪ್ರಧಾನಿ ಮೋದಿ (PM Modi) ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಅವರು ಸಂತಾಪ ಸೂಚಿಸಿದ್ದಾರೆ.
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Bengaluru Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಮಾಜಿ ಪ್ರಧಾನಿಗಳಿಬ್ಬರೂ ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ.
Advertisement
I am extremely pained by the passing away of senior leader and MP from Chamarajanagar, Shri V. Sreenivasa Prasad Ji. He was a champion of social justice, having devoted his life to the welfare of the poor, downtrodden and marginalised. He was very popular for his various works of…
— Narendra Modi (@narendramodi) April 29, 2024
Advertisement
ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ (Srinivasa Prasad) ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
Advertisement
ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ.
ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/sYhfJI0kZD
— H D Deve Gowda (@H_D_Devegowda) April 29, 2024
Advertisement
ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.