ಹೈದರಾಬಾದ್: ಲಕ್ನೋ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ (Nicholas Pooran) ಅವರು ಐಪಿಎಲ್‌ನಲ್ಲಿ (IPL) ವೇಗದ ಅರ್ಧಶತಕ ಸಿಡಿಸಿ ಈ ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.
ಸನ್‌ರೈಸರ್ಸ್ ವಿರುದ್ಧ ಕೇವಲ 18 ಎಸೆತಗಳಲ್ಲಿ 50 ರನ್ ಸಿಡಿಸಿ ಪೂರನ್ ಸಾಧನೆ ಮಾಡಿದ್ದಾರೆ. 4 ರನ್‌ಗೆ 1 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಆಗಮಿಸಿದ ಪೂರನ್ ಬೌಂಡರಿ, ಸಿಕ್ಸ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಪೂರನ್ ಔಟಾದಾಗ ತಂಡದ ಮೊತ್ತ 120 ಆಗಿತ್ತು. ಈ ಪೈಕಿ ಪೂರನ್ ಒಬ್ಬರೇ 70 ರನ್ (26 ಎಸೆತ, 6 ಬೌಂಡರಿ, 6 ಸಿಕ್ಸ್) ಚಚ್ಚಿದ್ದರು. ಇದನ್ನೂ ಓದಿ: ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?
Raining sixes in Hyderabad… but by #LSG 🌧
Nicholas Pooran show guides LSG to 77/1 after 6 overs 👊
Updates ▶ https://t.co/X6vyVEvxwz#TATAIPL | #SRHvLSG | @LucknowIPL pic.twitter.com/K2Dlk5AXQw
— IndianPremierLeague (@IPL) March 27, 2025
2025ರ ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಆಟಗಾರರು
ಪೂರನ್ (ಎಲ್‌ಎಸ್‌ಜಿ) – 50 ರನ್, 18 ಎಸೆತ
ಮಾರ್ಷ್ (ಎಲ್‌ಎಸ್‌ಜಿ) – 50 ರನ್, 21 ಎಸೆತ
ಹೆಡ್(ಎಸ್‌ಆರ್‌ಹೆಚ್) – 50 ರನ್, 21 ಎಸೆತ
ಐಪಿಎಲ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ಜೈಸಸ್ವಾಲ್ 13 ಎಸೆತದಲ್ಲಿ ಅರ್ಧಶತಕ ಸಿಡಿಸಿದರೆ ಕೆಎಲ್ ರಾಹುಲ್ 14 ಎಸೆತದಲ್ಲಿ 50 ಹೊಡೆದಿದ್ದಾರೆ.