ಕೊಲಂಬೊ: ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾಕ್ಕೆ ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಹಾಗಾಗಿ ಮುಂದಿನ ವಾರದಿಂದ ಶಾಲೆಗಳನ್ನು ಬಂದ್ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ.
Advertisement
ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ ಸ್ಥಗಿತಗೊಳಿಸುವುದಾಗಿ ಸರ್ಕಾರ ಘೋಷಿಸಿದೆ. ಶ್ರೀಲಂಕಾ ಶಿಕ್ಷಣ ಸಚಿವಾಲಯವು ಕೊಲಂಬೊ ನಗರ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ ಹಾಗೂ ಸರ್ಕಾರಿ ಅನುಮೋದಿತ ಖಾಸಗಿ ಶಾಲೆಗಳನ್ನು ಸ್ಥಗಿತಗೊಳಿಸಲು ಮುಂದಾಗಿದ್ದು, ಮುಂದಿನ ವಾರದಿಂದ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಕೇಳಿದೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹಕ್ಕೆ 25 ಜನ ಬಲಿ- ಅಪಾಯದ ಸುಳಿಯಲ್ಲಿ 40 ಲಕ್ಷ ಮಂದಿ
Advertisement
Advertisement
ಶ್ರೀಲಂಕಾ ತನ್ನ ಆಮದುಗಳಿಗೆ ಪಾವತಿಸಲು, ವಿದೇಶಿ ವಿನಿಮಯ ಪಡೆಯಲು ತೀವ್ರ ಒತ್ತಡದಲ್ಲಿದೆ. ಇದು ದೇಶದ ಆರ್ಥಿಕತೆಯ ಹಲವಾರು ಕ್ಷೇತ್ರಗಳಿಗೂ ಹಿನ್ನಡೆ ಉಂಟುಮಾಡುತ್ತಿದೆ ಎಂದು ಸುದ್ದಿ ಮಾಧ್ಯಮಗಳು ವರದಿಮಾಡಿವೆ.