ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.
ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಈಜಿದ್ದರು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ
Advertisement
#WATCH | Sri Lanka: Amid massive unrest in the country, protestors set ablaze the private residence of Sri Lankan PM Ranil Wickremesinghe#SriLankaCrisis pic.twitter.com/BDkyScWpui
— ANI (@ANI) July 9, 2022
ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಈಗಾಗಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಗಾಗಿ ಪಕ್ಷದ ನಾಯಕರ ಶಿಫಾರಸನ್ನು ಸ್ವೀಕರಿಸಿ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ