ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

Public TV
1 Min Read
SHRILANKA

ಕೊಲಂಬೊ: ಶ್ರೀಲಂಕಾದದಲ್ಲಿ ಬುಗಿಲೆದ್ದ ಜನರ ಆಕ್ರೊಶದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಇದರಿಂದ ಆಡಳಿತ ಪಕ್ಷದ ಸಂಸದನನ್ನೇ ಬಲಿ ತೆಗೆದುಕೊಳ್ಳುವಂತೆ ಮಾಡಿದೆ.

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಈ ವಿಷಯ ಬೆಳಕಿಗೆ ಬಂದಿದೆ. ಆಡಳಿತ ಪಕ್ಷದ ಓರ್ವ ಸಂಸದ ಮೃತಪಟ್ಟಿದ್ದು, ಈ ಸಂಘರ್ಷದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತ್ತುಕೋರಲ ಅವರು ನಿಟ್ಟಂಬುವದಲ್ಲಿ ಬರುತ್ತಿದ್ದ ವೇಳೆ, ಅವರ ಕಾರನ್ನು ತಡೆದು ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರು ಹತ್ತಿರದ ಕಟ್ಟಡದಲ್ಲಿ ಆಶ್ರಯ ಪಡೆಯಲು ಯತ್ನಿಸಿದ್ದಾರೆ. ಇದೇ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಕ್ರಿಕೆಟಿಗರ ಆಕ್ರೋಶ: ದ್ವೀಪ ರಾಷ್ಟ್ರದಲ್ಲಿ ನಡೆದಿರುವ ಹಿಂಸಾಚಾರವನ್ನು ಖಂಡಿಸಿರುವ ಶ್ರೀಲಂಕಾದ ಮಾಜಿ ಕ್ರಿಕೆಟಿಗರು, ಗೂಂಡಾಗಿರಿಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

ಮಹೇಲ ಜಯವರ್ಧನೆ, ಕುಮಾರ್ ಸಂಗಕ್ಕರ ಹಾಗೂ ಜಯಸೂರ್ಯ ಸಹ ದಾಳಿ ನಡೆಸಿರುವವರನ್ನು `ಘಾತುಕರು’ ಎಂದು ಕರೆದಿದ್ದಾರೆ. ಈ ಘಾತುಕರು ಪ್ರಧಾನಿಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಜೊತೆಗೂಡಿ, ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಅಮಾಯಕರ ಮೇಲೆ ದಾಳಿ ನಡೆಸಿದ್ದಾರೆ. ಇದೆಲ್ಲ ಹೇಗೆ ನಡೆಯಲು ಸಾಧ್ಯವಾಯಿತು? ಪೊಲೀಸರು ಮತ್ತು ಇತರರು ಇದನ್ನು ಕೇವಲ ನೋಡುತ್ತಿದ್ದರಷ್ಟೇ, ಎಂದು ಜಯವರ್ಧನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *