ಕೊಲಂಬೊ: ಪ್ರತಿಭಟನಾಕಾರರು ಹೆಚ್ಚುತ್ತಿರುವ ಒತ್ತಡದ ನಡುವೆ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದರು.
ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರು ಜುಲೈ 13 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶನಿವಾರದಂದು ಅಧ್ಯಕ್ಷರ ಭವನಕ್ಕೆ ಸಾವಿರಾರು ಜನರು ನುಗ್ಗಿ ದಾಂಧಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.
Advertisement
Advertisement
ಈ ಹಿಂದೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳನ್ನು ಒತ್ತುವರಿ ಮಾಡಿಕೊಂಡಿಕೊಳ್ಳುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
Advertisement
ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್ ವಿಕ್ರಮಸಿಂಘೆ ರಾಜೀನಾಮೆ
Advertisement
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರನೋರ್ವ, ನಾವು ಪ್ರಧಾನಿ ಮನೆಯೊಳಗಿದ್ದೇವೆ. ಪ್ರತಿಭಟನಾಕಾರರಾದ ನಾವೆಲ್ಲರೂ ಒಟ್ಟಿಗೆ ಸೇರಿ ಅಡುಗೆ ಮಾಡುತ್ತಿದ್ದೇವೆ. ನಾವು ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗಾಗಿ ಹೋರಾಟ ನಡೆಸುತ್ತಿದ್ದೇವೆ. ಅವರು ರಾಜೀನಾಮೆ ನೀಡಿದಾಗ ನಂತರ ಈ ಮನೆಯನ್ನು ತೊರೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲೇ ಅಡುಗೆ ಮಾಡಿ ತಿಂದ ಪ್ರತಿಭಟನಾಕಾರರು
ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಟೆಂಪಲ್ ಟ್ರೀ ನಿವಾಸದಲ್ಲಿ ಪ್ರತಿಭಟನಾಕಾರರು ಕೇರಂ ಆಟ ಆಡುವುದು, ಆರಾಮವಾಗಿ ಮಲಗಿರುವುದು ಮತ್ತು ಡುವುದು, ಅಡುಗೆ ಮಾಡುವುದು ಮಾಡುತ್ತಿದ್ದಾರೆ.