ಕೊಲೊಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದೆಲ್ಲೆಡೆ ಜನಾಕ್ರೋಶ ಹೆಚ್ಚಾಗಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲಿ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಲಿ ಸಬ್ರಿ ಒಂದೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ.
ದೇಶದ ಹಣಕಾಸು ಸಚಿವರಾಗಿ ಅಲಿ ಸಬ್ರಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ದೇಶಾದ್ಯಂತ ಹೆಚ್ಚಿರುವ ಜನಾಕ್ರೋಶದಿಂದಾಗಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು – ಪ್ರಧಾನಿ ಹೊರತುಪಡಿಸಿ, ಎಲ್ಲಾ ಸಚಿವರು ರಾಜೀನಾಮೆ
Advertisement
Advertisement
ತಕ್ಷಣದಿಂದ ಜಾರಿಗೆ ಬರುವಂತೆ ನಾನು ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
Advertisement
ಭಾನುವಾರ ರಾತ್ರಿ ಶ್ರೀಲಂಕಾ ಸರ್ಕಾರದ 26 ಸಚಿವರು ರಾಜೀನಾಮೆ ನೀಡಿದ್ದರು. ಅದಾದ ನಂತರ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ನಾಲ್ವರು ಹೊಸ ಸಚಿವರನ್ನು ನೇಮಕ ಮಾಡಿದ್ದರು. ಇದರಲ್ಲಿ ಅಲಿ ಸಬ್ರಿ ಅವರೂ ಒಬ್ಬರಾಗಿದ್ದರು. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
Advertisement
ಶ್ರೀಲಂಕಾದಲ್ಲಿ ಇಂಧನ, ಅಗತ್ಯ ವಸ್ತುಗಳ ಕೊರತೆ, ವಿದ್ಯುತ್ ಕಡಿತದಂತಹ ಸಮಸ್ಯೆಯಿಂದಾಗಿ ಬಿಕ್ಕಟ್ಟು ಎದುರಾಗಿದೆ. ಇದರಿಂದ ದೇಶಾದ್ಯಂತ ಜನರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.