ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜಪಕ್ಸೆ ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಅಂತೆಯೇ ಅವರ ಸಹೋದರರೂ ಪಲಾಯನಕ್ಕೆ ಮುಂದಾಗಿದ್ದಾರೆ. ಆದರೆ ಅದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಗೊಟಬಯ ರಾಜಪಕ್ಸೆ ಸಹೋದರರಾದ ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಹಾಗೂ ಮಾಜಿ ಸಚಿವ ಬಸಿಲ್ ರಾಜಪಕ್ಸೆ ದೇಶ ತೊರೆಯುವುದನ್ನು ಕೋರ್ಟ್ ತಡೆದಿದೆ. ಇದನ್ನೂ ಓದಿ: ಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅಧಿಕಾರಿ ಸ್ವೀಕಾರ
Advertisement
Advertisement
ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಸಚಿವ ಬಸಿಲ್ ರಾಜಪಕ್ಸೆ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಜುಲೈ 28 ರವರೆಗೆ ದೇಶವನ್ನು ತೊರೆಯದಂತೆ ಶ್ರೀಲಂಕಾದ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಹೊರಡಿಸಿದೆ.
Advertisement
ದ್ವೀಪ ರಾಷ್ಟ್ರದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ರಾಜಪಕ್ಸೆ ಕುಟುಂಬ ಆಡಳಿತದಿಂದ ದೇಶ ದುಸ್ಥಿತಿಗೆ ತಲುಪಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಸಾವಿರಾರು ಮಂದಿ ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಇದರಿಂದ ಭಯಭೀತರಾದ ಗೊಟಬಯ ರಾಜಪಕ್ಸೆ ವಿದೇಶಕ್ಕೆ ಪಲಾಯನಗೈದರು. ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದನ್ನೂ ಓದಿ: ಒಕ್ಕೂಟದ ಪತನದ ನಂತರ ರಾಜೀನಾಮೆ ನೀಡಲು ಮುಂದಾದ ಇಟಲಿ ಪಿಎಂ
Advertisement
ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿರುವ ರನಿಲ್ ವಿಕ್ರಮಸಿಂಘೆ ಅವರು ಪ್ರತಿಭಟನೆ ತಿಳಿಗೊಳಿಸಲು ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.