ಆನೇಕಲ್: ಎಲ್ಲೆಡೆ ಜಾತ್ರೆ ಎಂದರೆ ಸಣ್ಣ ರಥವನ್ನು ಸಿದ್ಧಪಡಿಸಿ ಆಚರಣೆ ಮಾಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಪುರಾಣ ಪ್ರಸಿದ್ಧ ದೇವಾಲಯಕ್ಕೆ ಹತ್ತಾರು ಗ್ರಾಮಗಳಿಂದ 120ಕ್ಕೂ ಅಡಿ ಎತ್ತರದ ಕುರ್ಜುಗಳ ಹೆಸರಿನ ತೆರನ್ನು ಎಳೆದು ತಂದು ಆಚರಣೆ ಮಾಡಲಾಗುತ್ತದೆ.
ಹೌದು, ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಸ್ಕೂರು ಗ್ರಾಮದಲ್ಲಿ, ಗ್ರಾಮದ ದೇವತೆ ಮದ್ದೂರಮ್ಮ ಜಾತ್ರೆಗೆ ಸುತ್ತಮುತ್ತಲ ಹತ್ತಾರು ಊರುಗಳಿಂದ ಕಿಲೋಮೀಟರ್ ಗಟ್ಟಲೆ ರಸ್ತೆ ಹಾಗೂ ಗ್ರಾಮಗಳಲ್ಲಿ ಬೃಹತ್ ಗಾತ್ರದ ಕುರ್ಜುಗಳನ್ನು ತಿಂಗಳುಗಳ ಕಾಲ ಸಿದ್ಧಪಡಿಸಲಾಗುತ್ತದೆ. ಸಾವಿರಾರು ಜನ ಗ್ರಾಮದ ಭಕ್ತರು ಗ್ರಾಮದೇವತೆ ಮದ್ದೂರಮ್ಮನ ದೇವಾಲಯದ ಆವರಣಕ್ಕೆ ತೇರನ್ನು ಎಳೆದು ತರುತ್ತಾರೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಜಾತ್ರೆ ನಡೆಯದೇ ಈ ಬಾರಿ ಗ್ರಾಮಸ್ಥರು ಹಾಗೂ ಭಕ್ತರು ಅದ್ಧೂರಿಯಾಗಿ ತೇರುಗಳನ್ನು ಸಿದ್ಧಪಡಿಸಿ ದೇವಾಲಯದ ಬಳಿ ಎಳೆದು ತಂದು ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ
ಇನ್ನು 800 ವರ್ಷಕ್ಕೂ ಹೆಚ್ಚು ಇತಿಹಾಸ ಇರುವ ಹುಸ್ಕೂರು ಮದ್ದೂರಮ್ಮ ದೇವಾಲಯ ಜಾತ್ರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹೊರ ಭಾಗದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಮದ್ದೂರಮ್ಮ ತಾಯಿಯನ್ನು ನಂಬಿ ಪೂಜೆ ಸಲ್ಲಿಸಿದರೆ ತಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುವ ನಂಬಿಕೆ ಹಲವಾರು ವರ್ಷಗಳಿಂದ ಇಲ್ಲಿನ ಭಕ್ತಾದಿಗಳು ನಂಬಿಕೊಂಡು ಬಂದಿದ್ದಾರೆ. ಈ ಬಾರಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಪೆÇಲೀಸರು ವಿಶೇಷ ಭದ್ರತೆಯನ್ನು ಕೈಗೊಂಡಿದ್ದರು. ಜಾತ್ರಾ ಪ್ರಯುಕ್ತ ಅಲ್ಲಲೇ ಮಜ್ಜಿಗೆ ಪಾನಕ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇವಾಲಯದಲ್ಲಿ ಮದ್ದೂರಮ್ಮ ತಾಯಿ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ಮಾಡಲಾಗಿತ್ತು. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ
ಕೊರೊನಾ ಮಹಾಮಾರಿ ಕಾರಣದಿಂದ ಜನರು ಜಾತ್ರೆ, ಹಬ್ಬ ಹರಿದಿನಗಳಿಂದ ಕಳೆದ ಎರಡು ವರ್ಷಗಳಿಂದ ದೂರ ಇದ್ದರು. ಈ ಬಾರಿ ಮದ್ದುರಮ್ಮ ಜಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ಅದ್ಧೂರಿಯಾಗಿ ವಿಜೃಂಭಣೆಯಿಂದ ಜಾತ್ರೆ ನಡೆದಿದೆ.