ChitradurgaDistrictsKarnatakaLatestLeading NewsMain Post

ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ ಕೋಮಲಾ ಆದೇಶಿಸಿದ್ದಾರೆ.

ಆರೋಪಿಯನ್ನು ಐದು ದಿನಗಳ ಕಾಲ ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಿಚಾರಣೆ ನಡೆಸಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ಶ್ರೀಗಳು ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಪೊಲೀಸ್ ಕಸ್ಟಡಿಯಲ್ಲೇ ವೈದ್ಯಕೀಯ ನೆರವು ನೀಡುವಂತೆ ಚಿತ್ರದುರ್ಗದ ಜೆಎಂಎಫ್ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲು ನ್ಯಾಯಾಧೀಶರು ಸೂಚಿಸಿದ್ದರು. ಬಳಿಕ 4 ಗಂಟೆಗೆ ಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದನ್ನೂ ಓದಿ: ಆಸ್ಪತ್ರೆ ದಾಖಲಾಗಿದ್ದ ಪದ್ಮಶ್ರೀ ಪುರಸ್ಕೃತೆಗೆ ಬಲವಂತವಾಗಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ

Live Tv

Leave a Reply

Your email address will not be published.

Back to top button