BelgaumDistrictsKarnatakaLatestMain Post

ಜಮೀರ್ ಅಹ್ಮದ್‍ಖಾನ್ ಸಿಎಂ ಆಗ್ತಾರೆ – ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು.  ಇದನ್ನೂ ಓದಿ: ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ. ಇದರ ಜೊತೆಗೆ ಬೈಲಹೊಂಗಲ ಭಾಗದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಒಬ್ಬರೆ ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆಯೂ ಮಹಾಂತೇಶ ಕೌಜಲಗಿ ಆರಿಸಿ ಬರಬೇಕು. ಮಂತ್ರಿಯೂ ಆಗಬೇಕು ಎಂದು ಆಶೀರ್ವಾದಿಸಿದರು.  ಇದನ್ನೂ ಓದಿ: ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ – ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ

Live Tv

Leave a Reply

Your email address will not be published.

Back to top button