ರಾಮನಗರ: ಜಿಲ್ಲೆಯ ಕನಕಪುರದಲ್ಲಿ 10ಕ್ಕೂ ಹೆಚ್ಚು ಬಡ ಜನರನ್ನು ಟಾರ್ಗೆಟ್ ಮಾಡಿ, ಅವರೆಲ್ಲರನ್ನು ಮತಾಂತರಕ್ಕೆ (Conversion) ಯತ್ನಿಸಿದ ಆರೋಪ ಬಂದಿದೆ.
ಕನಕಪುರ (Kanakpura) ಪಟ್ಟಣದ ನವಾಜಿಬಾರೆ ಬಡಾವಣೆಯ ಮನೆಯೊಂದರಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಮತಾಂತರ ಮಾಡಲಿ ಕೆಲ ಕ್ರೈಸ್ತ ಸಮುದಾಯದವರು ಯತ್ನಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರೆಲ್ಲರನ್ನು ತಡರಾತ್ರಿ ಮತಾಂತರ ಮಾಡಲು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಿ ಶ್ರೀರಾಮ ಸೇನೆಯ (Sri Ram Sena) ಮುಖಂಡರು ಟೌನ್ ಪೊಲೀಸರಿಗೆ (Police) ದೂರು ನೀಡಿದ್ದರು.
Advertisement
Advertisement
ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಕನಕಪುರ ಟೌನ್ ಪೊಲೀಸರು 12 ಮಂದಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಎಲ್ಲರ ಮಾಹಿತಿ ಕಲೆಹಾಕಿ ಬಳಿಕ ವಾಪಸ್ ಕಳುಹಿಸಿದ್ದಾರೆ.
Advertisement
ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಮಾತನಾಡಿ, ಬಡ ಕುಟುಂಬಗಳನ್ನು ಗುರಿಯಾಗಿಸಿ ಮಾಡುತ್ತಿರುವ ಇಬ್ಬರು ಕ್ರೈಸ್ತ ಸಮುದಾಯದ ಮುಖಂಡರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಗಿಲ್ಲ ಎಂದು ಕಿಡಿಕಾರಿದರು.
Advertisement
ಘಟನೆಗೆ ಸಂಬಂಧಿಸಿ ಸಚಿವ ಅಶ್ವಥ್ ನಾರಾಯಣ್ (Ashwath Narayan) ಪ್ರತಿಕ್ರಿಯಿಸಿ, ಮತಾಂತರ ಆಗಬಾರದು ಅಂತಲೇ ಕಾಯ್ದೆಯನ್ನು ತರಲಾಗಿದೆ. ಧರ್ಮದ ಬದಲಾವಣೆಗೆ ಅವಕಾಶ ಕೊಡಬಾರದು. ಜನತೆಯ ಭಾವನೆಗೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆ ರೀತಿ ಮತಾಂತರದಲ್ಲಿ ತೊಡಗಿದ್ದರೆ ಕಾನೂನಿನ ಬಿಸಿ ಮುಟ್ಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅದ್ಧೂರಿ ದಸರಾಗೆ ಖರ್ಚಾಗಿದ್ದು ಬರೋಬ್ಬರಿ 28 ಕೋಟಿ
ಕನಕಪುರ ಭಾಗದಲ್ಲಿ ಈ ರೀತಿ ಆರೋಪ ಕೇಳಿಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದಿನಿಂದಲೂ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಕಪಾಲಿ ಬೆಟ್ಟದ ಯೇಸು ಪ್ರತಿಮೆ ವಿಚಾರ ಇನ್ನೂ ಕೋರ್ಟ್‍ನಲ್ಲಿ ಇರುವಾಗಲೇ ಪಡಿತರ ಚೀಟಿ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ : ಅಧಿಕೃತ ಆಹ್ವಾನವಿಲ್ಲ, ಹೋಗಲ್ಲ ಎಂದ ಸಿದ್ಧರಾಮಯ್ಯ