ಚಿಕ್ಕಮಗಳೂರು: ಪ್ರತಿವರ್ಷ ದತ್ತಪೀಠಕ್ಕೆ (Datta Peeta) ಬರುವುದು ಅಲ್ಲಿ ಹೆಣ ಇಲ್ಲದ ಗೋರಿಗಳನ್ನು ನೋಡಿಕೊಂಡು ಹೋಗುವುದು ಮಾಡುತ್ತಿರುವುದನ್ನು ನೋಡಿ ನಮಗೆ ಬಿಜೆಪಿ (BJP) ಸರ್ಕಾರದ ಮೇಲೆ ಹೇಸಿಗೆ ಬಂದಿದೆ ಎಂದು ಶ್ರೀರಾಮಸೇನೆ (Sri Rama Sene) ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಚಿಕ್ಕಮಗಳೂರು (Chikkamagaluru) ನಗರದ ಶಂಕರ ಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿವರ್ಷ ನಾವು ಅವರಿಗೆ ಎಚ್ಚರಿಕೆ ನೀಡಿ, ನೀಡಿ ಬೇಜಾರಾಗಿದೆ. ಧರ್ಮದ ವಿಚಾರದಲ್ಲಿ ಈ ಡ್ರಾಮಾ ಒಳ್ಳೆದಲ್ಲ. ಏನಾದರೂ ಆಗಲಿ ಎಂದು ದತ್ತಪೀಠದ ವಿಚಾರದಲ್ಲಿ ಸರ್ಕಾರ ತಕ್ಷಣ ಗಟ್ಟಿ ನಿರ್ಧಾರ ಮಾಡಲಿ. ಕೂಡಲೇ ದತ್ತಪೀಠವನ್ನು ಹಿಂದೂಗಳ ಪೀಠವೆಂದು ಆದೇಶಿಸಿ, ಅಲ್ಲಿ ಹಿಂದೂ ಅರ್ಚಕರ ನೇಮಿಸಬೇಕೆಂದು ಆಗ್ರಹಿಸಿದರು.
Advertisement
Advertisement
ಇಂದಿನಿಂದ 7 ದಿನಗಳ ಕಾಲ ನಡೆಯುವ ದತ್ತಮಾಲಾ ಅಭಿಯಾನದ ನ. 13ರಂದು ಕೊನೆಗೊಳ್ಳಲಿದೆ. ಅಷ್ಟರೊಳಗೆ ಹಿಂದೂ ಅರ್ಚಕರ ನೇಮಿಸಬೇಕು. ಇಲ್ಲವಾದರೆ, ಪರಿಸ್ಥಿತಿ ಕಠಿಣವಾಗಲಿದೆ. ಅಲ್ಲಿ ಹಿಂದೂಗಳು ಹಾಗೂ ದತ್ತಭಕ್ತರಿಂದ ಏನಾದರೂ ಅನಾಹುತವಾದರೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ಅಷ್ಟೇ ಅಲ್ಲದೇ ಮಂಗಳೂರಿನಲ್ಲಿ ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರವೂ ಅಲುಗಾಡುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬಾದಾಮಿಯಲ್ಲಿ ಸ್ಪರ್ಧಿಸದಿದ್ರೆ ಹೆಣ್ಮಕ್ಕಳು ಧರಣಿಗೆ ಕೂರ್ತಿವಿ ಅಂದಿದ್ದಾರೆ: ಸಿದ್ದರಾಮಯ್ಯ
Advertisement
ಕಳೆದ ವರ್ಷ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪನವರ ಪೀಠ ಹೋಗುತ್ತೆ ಎಂದು ಹೇಳಿದ್ದೆವು. ಅದರಂತೆ ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪನವರು ಪೀಠ ಕಳೆದುಕೊಂಡರು. ಈಗ ಬೊಮ್ಮಾಯಿಗೂ ಎಚ್ಚರಿಕೆ ನೀಡುತ್ತಿದ್ದೇವೆ. ಮುಂದೆ ನಿಮ್ಮ ಸರ್ಕಾರ ಬರಬೇಕು ಎಂದರೆ ತಕ್ಷಣ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ. ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದರು.
Advertisement
ಶ್ರೀರಾಮ ಸೇನೆ ವತಿಯಿಂದ ನಡೆಯುತ್ತಿರುವ 18ನೇ ವರ್ಷದ ಈ ದತ್ತಮಾಲಾ ಅಭಿಯಾನ ಇದೇ 13ರಂದು ಕೊನೆಗೊಳ್ಳಲಿದೆ. ಇಂದು ಚಿಕ್ಕಮಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಜನ ಮಾಲಾಧಾರಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ದತ್ತಭಕ್ತರು ಮಾಲೆ ಧರಿಸಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಮಾಲಾಧಾರಿಗಳಾಗಿದ್ದಾರೆ. ಇದೇ ತಿಂಗಳ 11ರಂದು ಶಂಕರಮಠದಲ್ಲಿ ದೀಪೋತ್ಸವ, 12ರಂದು ಪಡಿ ಸಂಗ್ರಹ ಹಾಗೂ 13ರಂದು ರಾಜ್ಯಾದ್ಯಂತ ಬರುವ 8 ಸಾವಿರಕ್ಕೂ ಅಧಿಕ ದತ್ತಭಕ್ತರು ನಗರದಲ್ಲಿ ಶೋಭಾಯಾತ್ರೆ ನಡೆಸಿ, ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ಇದನ್ನೂ ಓದಿ: ದೆಹಲಿ ರೇಪ್ ಕೇಸ್ – ಮರಣದಂಡನೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿದ ಸುಪ್ರೀಂ