ಬೆಂಗಳೂರು: ಸಿಎಂ ಬಿಎಸ್ ಯುಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದು, ಪಕ್ಷದ ಹೈಕಮಾಂಡ್ ಅವರೊಂದಿಗೆ ಪ್ರಮುಖ ಚರ್ಚೆಗಳನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಪುಟ ರಚನೆ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಬಿಎಸ್‍ವೈ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಇಂದು ದೆಹಲಿಗೆ ಸಿಎಂ ತೆರಳುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ರಾಜ್ಯದ ಪ್ರವಾಹದ ಬಗ್ಗೆ ಚರ್ಚಿಸಿ, ಹೆಚ್ಚಿನ ಸಹಾಯ ಪಡೆದುಕೊಂಡು ಬರುತ್ತಾರೆ. ಅಲ್ಲದೇ ಮುಖ್ಯಮಂತ್ರಿಗಳು ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸುತ್ತಾರೆ. ಆ ಬಳಿಕ ಬೆಂಗಳೂರಿಗೆ ವಾಪಸಗಿ ಯಾವಾಗ ಸಂಪುಟ ರಚನೆ ಮಾಡಬೇಕೆಂಬ ನಿರ್ಧಾರ ಮಾಡುತ್ತಾರೆ. ನಾಳೆಯೊಳಗೆ ಸಂಪುಟ ರಚನೆ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಇದೇ ಸಂದರ್ಭದಲ್ಲಿ ಫೋನ್ ಕದ್ದಾಲಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಅವರು ಈ ಬಗ್ಗೆ ಖಚಿತ ನಿರ್ಧಾರ ಮಾಡುತ್ತಾರೆ. ಈ ರೀತಿ ಮಾಡುವುದು ತಪ್ಪು. ರಾಜಕಾರಣಕ್ಕಾಗಿ ವ್ಯಕ್ತಿಯೊಬ್ಬರ ವೈಯಕ್ತಿಕ ಅಂಶಗಳನ್ನು ಎಳೆದು ತರುವುದು ತಪ್ಪು. ಆದ್ದರಿಂದ ನಾನು ಸಿಎಂ ಅವರ ಎದುರು ಈ ಬಗ್ಗೆ ತನಿಖೆ ನಡೆಸಲು ಒತ್ತಾಯ ಮಾಡುತ್ತೇನೆ ಎಂದರು.
Advertisement
ಬಿಎಸ್‍ವೈ ಅವರು ಇಂದು ದೆಹಲಿಗೆ ಪ್ರಯಾಣ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳಾದ ಶ್ರೀರಾಮುಲು, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಮಾತುಕತೆ ನಡೆಸಿದರು. ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಕೂಡ ಬಿಎಸ್‍ವೈ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.